ಉಡುಪಿ: ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಮೂಲೂರು ಬಳಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 29 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರPTI
Updated on

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಮೂಲೂರು ಬಳಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 29 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಪ್ರತೀಶ್ ಪ್ರಸಾದ್ ಎಂದು ಗುರುತಿಸಲಾಗಿದ್ದು, ಗಾಯಾಳು ನಿಹಾಲ್ ವಿಲ್ಸನ್ (29) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ರಾತ್ರಿ ಉಡುಪಿಯ ಕರಾವಳಿ ಜಿಲ್ಲೆಯ ಕೌಪ್ ನಿಂದ ಪಡುಬಿದ್ರಿಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು.

ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಿಸದೇ ಪ್ರತೀಶ್ ಸಾವನ್ನಪ್ಪಿದ್ದಾರೆ. ಮೂಳೆ ಮುರಿತ ಸೇರಿದಂತೆ ಹಲವು ಗಾಯಗಳಿಂದ ಬಳಲುತ್ತಿದ್ದ ನಿಹಾಲ್ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಟ್ ಅಂಡ್ ರನ್ ವಾಹನವನ್ನು ಗುರುತಿಸಲು ಪೊಲೀಸರು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.ಆದಾಗ್ಯೂ, ಇನ್ನೂ ಯಾವುದೇ ನಿರ್ದಿಷ್ಟ ಪುರಾವೆಗಳು ಕಂಡುಬಂದಿಲ್ಲ ಎಂದು ಅವರು ಹೇಳಿದರು. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಸಂಗ್ರಹ ಚಿತ್ರ
Bengaluru Shocking: ಪುಂಡರ ಹಾವಳಿ, ಕಾರಲ್ಲಿ ತೆರಳುತ್ತಿದ್ದ ದಂಪತಿಗೆ ಕಿರುಕುಳ! Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com