ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಮನೆ ಸೇರಿ ಬೆಂಗಳೂರಿನ ಹಲವೆಡೆ ಇಡಿ ದಾಳಿ, ಪರಿಶೀಲನೆ

ಗೋಲ್ಡ್​ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ.
Ranya Rao
ರನ್ಯಾ ರಾವ್
Updated on: 

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಟಿ ರನ್ಯಾ ರಾವ್​ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಇಸಿಐಆರ್ ಎಂದರೆ ಎನ್​ಫೋರ್ಸ್​ಮೆಂಟ್ ಕೇಸ್ ಇನ್​ಫಾರ್ಮೇಷನ್ ರಿಪೋರ್ಟ್. ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಕೇಸ್ ದಾಖಲಾಗಿದೆ.

ನಟಿ ರನ್ಯಾ ರಾವ್ ಅವರ ಫ್ಲ್ಯಾಟ್, ಉದ್ಯಮಿ ತರುಣ್ ರಾಜ್ ಅವರ ಮನೆ, ಆರ್​ಟಿ ನಗರದಲ್ಲಿರುವ ಜ್ಯೋತಿಷಿ ಕಚೇರಿ, ಪೊಲೀಸ್ ಅಧಿಕಾರಿಗಳು ಹಾಗೂ ಕಸ್ಟಮ್ಸ್ ಅಧಿಕಾರಿಗಳ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದಾರೆ.

Ranya Rao
ಹಿರಿಯ ಅಧಿಕಾರಿಗಳಿಗೆ ಮೀಸಲಾಗಿದ್ದ ಶಿಷ್ಠಾಚಾರಗಳನ್ನು ನಟಿ ರನ್ಯಾ ರಾವ್ ಉಲ್ಲಂಘಿಸಿದ್ದರು: SPP ಕೋರ್ಟ್ ಗೆ ಹೇಳಿಕೆ

ಗೋಲ್ಡ್​ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾವಾಲಾ ದಂಧೆ ಮೂಲಕ ಭಾರತದಿಂದ ಹಣ ದುಬೈಗೆ ಹೋಗುತ್ತಿತ್ತು. ಬಳಿಕ ಚಿನ್ನದ ಗಟ್ಟಿ ರೂಪದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ವಿಮಾನ ನಿಲ್ದಾಣದ ಭದ್ರತೆ ಮತ್ತು ಕಸ್ಟಮ್ಸ್ ಕಾರ್ಯವಿಧಾನಗಳಲ್ಲಿನ ಸಂಭಾವ್ಯ ಲೋಪಗಳು ಅಥವಾ ಒಪ್ಪಂದದ ಬಗ್ಗೆಯೂ ಏಜೆನ್ಸಿಗಳು ತನಿಖೆ ನಡೆಸುತ್ತಿವೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ರನ್ಯಾ ರಾವ್ ಅವರನ್ನು ಬಂಧಿಸಿದ ನಂತರ ಮಾರ್ಚ್ 4 ರಂದು ಈ ದಾಳಿಗಳು ನಡೆದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com