
ಬೆಂಗಳೂರು: ನೀರು ಹಿಡಿಯಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನಗರದ ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಸೆಲ್ವಿ (24) ಎಂದು ಗುರ್ತಿಸಲಾಗಿದೆ. ಬೆಳಗಿನ ಜಾವ ನೀರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಮೋಟಾರ್ ಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನೆ ಬಳಿಕ ಮಾರುಕಟ್ಟೆ ರಸ್ತೆಯಲ್ಲಿ ಬಿಬಿಎಂಪಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ರಮವಾಗಿ ಮೋಟಾರ್ ಗೆ ವಿದ್ಯುತ್ ಕನೆಕ್ಷನ್ ಕೊಡಲಾಗಿತ್ತು, ಈ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷೇತ್ರದ ಶಾಸಕ ಜಮೀರ್ ಅವರು ಸ್ಥಳಕ್ಕಾಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.
ಸ್ಥಳೀಯರ ಪ್ರತಿಭಟನೆ ಪರಿಣಾಮ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ. ಈ ನಡುವೆ ಪ್ರತಿಭಟನಾಕಾರರ ಮನವೊಲಿಸಲು ಪೊಲೀಸಲು ಮುಂದಾಗಿದ್ದು, ಸ್ಥಳೀಯರು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಸ್ಥಳದಲ್ಲಿ ಕೆಎಸ್ಆರ್'ಪಿ ತುಕಡಿ ನಿಯೋಜನೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Advertisement