
ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ಇಂದು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ರನ್ಯಾ ರಾವ್ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರೆ, ಡಿಆರ್ಐ ಪರವಾಗಿ ಮಧು ರಾವ್ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಕೋರ್ಟ್ ರನ್ಯಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.
Advertisement