
ಮೈಸೂರು: ಮೈಸೂರಿನ ಅನುಗನಹಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಮೃತ ವ್ಯಕ್ತಿಯನ್ನು ಸೂರ್ಯ ಎಂದು ಗುರುತಿಸಲಾಗಿದೆ. ಮದುವೆಯಾಗಿದ್ದರು ಸೂರ್ಯ ಮತ್ತೊಬ್ಬಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಈ ವಿಚಾರ ತಿಳಿದು ಆತನ ಪತ್ನಿ ಮತ್ತು ತಾಯಿ ಮನೆ ಬಿಟ್ಟು ಹೋಗಿದ್ದರು. ಸೂರ್ಯ ಇನ್ ಸ್ಟಾಗ್ರಾಮನಲ್ಲಿ ಶ್ವೇತಾ ಎಂಬಾಕೆಯ ಜೊತೆ ಪರಿಚಯ ಮಾಡಿಕೊಂಡಿದ್ದಾನೆ. ನಂತರ ಅವರು ಒಟ್ಟಾಗಿ ಸುತ್ತುವುದು ಅಲ್ಲದೆ ಖಾಸಗಿ ಫೋಟೋಗಳನ್ನು ಸ್ಟೇಟಸ್ ಗೆ ಹಾಕುತ್ತಿದ್ದರು.
ಮೊದ ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ನಂತರ ಶ್ವೇತಾ ಆಸ್ತಿಗಾಗಿ ಪೀಡಿಸುತ್ತಿದ್ದಳಂತೆ. ಇನ್ನು ನಿನ್ನೆ ರಾತ್ರಿ ಸಹ ಇಬ್ಬರು ತೋಡದ ಮನೆಯಲ್ಲಿ ಒಟ್ಟಾಗಿ ಇದ್ದರು. ಆದರೆ ಬೆಳಗಾಗುವಷ್ಟರಲ್ಲಿ ಸೂರ್ಯನ ಹತ್ಯೆಯಾಗಿದೆ. ಈ ಕೊಲೆಯನ್ನು ಶ್ವೇತಾಳೆ ಮಾಡಿದ್ದಾಳೆ ಎಂದು ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಜಯಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement