ರಾಜ್ಯ

ಕಲಬುರಗಿಯಲ್ಲಿ ಭಾರೀ ಬಿಸಿಲು; ಐನಾಪುರದಲ್ಲಿ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು

ಕಲಬುರಗಿಯಲ್ಲಿ ಭಾರೀ ಬಿಸಿಲು; ಐನಾಪುರದಲ್ಲಿ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು
ತಾಪಮಾನ
Published On :

ಬೆಂಗಳೂರು: ಚಳಿಗಾಲ ಕಡಿಮೆಯಾಗುತ್ತಿದ್ದಂತೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಐನಾಪುರ ಹೋಬಳಿ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಐಎಂಡಿ ನೀಡಿದ ಮುನ್ಸೂಚನೆ ಪ್ರಕಾರ, ಮುಂದಿನ ಐದು ದಿನಗಳವರೆಗೆ ಉತ್ತರ ಕರ್ನಾಟಕದ ಒಳನಾಡಿನಲ್ಲಿ ಮಾರ್ಚ್ 15 ರಿಂದ 17 ರವರೆಗೆ ಗರಿಷ್ಠ ತಾಪಮಾನ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಮಾರ್ಚ್ 18 ರಿಂದ 19 ರವರೆಗೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಇಂತಹ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಐಎಂಡಿ ಬಿಸಿ ಗಾಳಿಯ ಎಚ್ಚರಿಕೆಯನ್ನು ನೀಡಿದೆ.

ಆದಾಗ್ಯೂ, ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಕಂಡುಬರುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ತಾಪಮಾನ ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುತ್ತದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC)ದ ಪ್ರಕಾರ, ಕಲಬುರಗಿ, ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳು ಸೇರಿದಂತೆ ಹಲವಾರು ಜಿಲ್ಲೆಗಳ ಅನೇಕ ಸ್ಥಳಗಳು ಮತ್ತು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿನ್ನೆ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚು ದಾಖಲಾಗಿದೆ.

ಅದೇ ರೀತಿ, ತುಮಕೂರು, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ತಾಪಮಾನವು ವಿಪರೀತ ಹೆಚ್ಚಾಗಿದೆ.

"ಕಲಬುರಗಿ ಜಿಲ್ಲೆಯಲ್ಲಿ 17 ಸ್ಥಳಗಳು, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ 13 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 10 ಸ್ಥಳಗಳು, ಯಾದಗಿರಿ ಜಿಲ್ಲೆಯಲ್ಲಿ ಎಂಟು ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಆರು ಸ್ಥಳಗಳು, ತುಮಕೂರು ಜಿಲ್ಲೆಯಲ್ಲಿ ಮೂರು ಸ್ಥಳಗಳು, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಲಾ ಎರಡು ಸ್ಥಳಗಳು, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಂದು ಸ್ಥಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚಿನ ತಾಪಮಾನ ದಾಖಲಿಸಿದೆ" ಎಂದು ಕೆಎಸ್‌ಎನ್‌ಡಿಎಂಸಿ ಬಿಡುಗಡೆ ಮಾಡಿದ ಹವಾಮಾನ ಬುಲೆಟಿನ್ ನಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.