
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಸಿದ್ದು ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
41ನೇ ವಾರ್ಡ್ ಸದಸ್ಯರಾಗಿರುವ ಮಂಗೇಶ ಪವಾರ 40 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಆಯ್ಕೆಯಾಗಿದ್ದರೆ, 43ನೇ ವಾರ್ಡಿನ ಸದಸ್ಯೆ ವಾಣಿವಿಲಾಸ ಜೋಶಿ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ರಾಜು ಭಾತಖಾಂಡೆ, ಪಕ್ಷೇತರ ಅಭ್ಯರ್ಥಿ ಬಸವರಾಜ ಮೋದಗೇಕರ್, ಎಐಎಂಐಎಂನ ಶಾಹಿದ್ಖಾನ್ ಪಠಾಣ ನಾಮಪತ್ರ ಸಲ್ಲಿಸಿದರು. ತದನಂತರ ರಾಜು ಭಾತಖಾಂಡೆ ಹಾಗೂ ಶಾಹಿದ್ಖಾನ್ ಪಠಾಣ ತಮ್ಮ ನಾಮಪತ್ರ ಹಿಂಪಡೆದರು.
ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 65 ಮತದಾರ ಪೈಕಿ 60 ಮಂದಿ ಹಾಜರಿದ್ದರು. ಆದರೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕ ಆಸಿಫ್ ಸೇಠ್, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಓರ್ವ ಪಾಲಿಕೆ ಸದಸ್ಯ ಗೈರಾಗಿದ್ದರು.
Advertisement