ಜಮೀರ್ ಖಾನ್-ಮಲ್ಲಿಕಾರ್ಜುನ್ ಖರ್ಗೆ-ಸೈಯ್ಯದ್ ಅಲಿ ಅಲ್ ಹುಸೇನಿ
ರಾಜ್ಯ
ಜಮೀರ್ ಬಣಕ್ಕೆ ಹಿನ್ನಡೆ: ನಾಸೀರ್ ಹುಸೇನ್ ಆಪ್ತನಿಗೆ ಒಲಿದ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನ
ಚಿತ್ರದುರ್ಗದ ಅನ್ವರ್ ಪಾಷಾಗೆ ಅಧ್ಯಕ್ಷ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಜಮೀರ್ ಖಾನ್ ಪಟ್ಟು ಹಿಡಿದಿದ್ದರು.
ಬೆಂಗಳೂರು: ವಕ್ಫ್ ಸಚಿವನಾಗಿದ್ದರೂ ಜಮೀರ್ ಅಹ್ಮದ್ ಖಾನ್ ಗೆ ವಕ್ಫ್ ಬೋರ್ಡ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಹಿನ್ನೆಡೆಯಾಗಿದ್ದು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಆಪ್ತ ಸೈಯ್ಯದ್ ಅಲಿ ಅಲ್ ಹುಸೇನಿ ಅವರನ್ನು ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ವಕ್ಫ್ ಬೋರ್ಡ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಎರಡು ಬಣಗಳ ನಡುವೆ ತಿಕ್ಕಾಟ ನಡೆದಿತ್ತು. ಚಿತ್ರದುರ್ಗದ ಅನ್ವರ್ ಪಾಷಾಗೆ ಅಧ್ಯಕ್ಷ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಜಮೀರ್ ಖಾನ್ ಪಟ್ಟು ಹಿಡಿದಿದ್ದರು. ಆದರೆ ಈ ಒತ್ತಡಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಒಪ್ಪಲಿಲ್ಲ. ಹೀಗಾಗಿ ಅಸಮಾಧಾನದಿಂದ ಜಮೀರ್ ಹೊರನಡೆದಿದ್ದರು.
ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರದಂತೆ ಮೊದಲಿಗೆ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್ ಮುಹಮ್ಮದ್ ಅಲಿ ಹುಸೈನಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಎರಡೂವರೆ ವರ್ಷಗಳ ನಂತರ ಅಧ್ಯಕ್ಷರು ಬದಲಾಗಬಹುದು.


