
ಉಡುಪಿ: ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್ ಗೆ ರಾಜ್ಯ ಸರ್ಕಾರದ ಅಧಿಕಾರಿಗಳೇ ಎಸ್ಕಾರ್ಟ್ ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ದುಬೈನಿಂದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ತೊಡಗಿದ್ದ ರನ್ಯಾ ರಾವ್ಗೆ ಇಲ್ಲಿನ ಅಧಿಕಾರಿಗಳು ಪ್ರೊಟೋಕಾಲ್ ವ್ಯವಸ್ಥೆ ಮಾಡಿ ತಪಾಸಣೆ ಇಲ್ಲದೆ ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಈ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ ಎನ್ನಲಾಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪ್ರಲ್ಹಾದ್ ಜೋಶಿ ಆಗ್ರಹಿಸಿದರು.
ಗೃಹ ಸಚಿವ ಪರಮೇಶ್ವರ್ ಪ್ರಕರಣವನ್ನು ಮೊದಲು ಸಿಐಡಿ ತನಿಖೆಗೆ ಕೊಟ್ಟರು. ರಾಮಚಂದ್ರ ರಾವ್ ಡಿಜಿಐ ಆಗಿದ್ದಾರೆ ಎಂದು ಅಡಿಷನಲ್ ಚೀಫ್ ಸೆಕ್ರೇಟರಿಗೆ ಕೊಟ್ಟಿದ್ದೇವೆ ಎನ್ನುತ್ತಾರೆ. ಕಸ್ಟಮ್ ತಪ್ಪಿಸಿ ಪ್ರೊಟೋಕಾಲ್ ಮೂಲಕ ಹೇಗೆ ಕರೆತಂದಿರಿ? ಎಂದು ಪ್ರಶ್ನಿಸಿದರು.
ಸಮಾಜ ವಿದ್ರೋಹಿ ಕೃತ್ಯಕ್ಕೆ ಬಳಕೆ ಆತಂಕ: ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಬರುವವರೆಗೂ ನಿಮ್ಮ ಇಂಟೆಲಿಜೆನ್ಸ್ ಏನು ಮಾಡುತ್ತಿತ್ತು? ಎಂಬಂತಹ ಅನೇಕ ಪ್ರಶ್ನೆಗಳಿವೆ. ಸ್ಮಗ್ಲಿಂಗ್ನ ಬಂಗಾರ ಮತ್ತು ಅಂತಹ ಹಣ ಸಮಾಜ ವಿದ್ರೋಹಿ ಕೃತ್ಯಕ್ಕೆ ಬಳಕೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಜೋಶಿ ಕಳವಳ ವ್ಯಕ್ತಪಡಿಸಿದರು.
Advertisement