Mangaluru: ರಾಜ್ಯದ ಅತಿದೊಡ್ಡ ಮಾದಕವಸ್ತು ಜಾಲ ಭೇದಿಸಿದ ಪೊಲೀಸರು; ಇಬ್ಬರು ದಕ್ಷಿಣ ಆಫ್ರಿಕಾ ಪ್ರಜೆಗಳ ಬಂಧನ

ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಪೊಲೀಸರು ಮಂಗಳೂರಿನ ಪಂಪ್‌ವೆಲ್‌ನಲ್ಲಿ ಹೈದರ್ ಅಲಿ ಎಂಬಾತನನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಮಂಗಳೂರು: 75 ಕೋಟಿ ರೂ. ಮೌಲ್ಯದ 37 ಕೆಜಿಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಂಡಿದ್ದು, ಇದು ರಾಜ್ಯದಲ್ಲಿ ಇದುವರೆಗಿನ ಅತಿದೊಡ್ಡ ಮಾದಕವಸ್ತು ವಶವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಪೊಲೀಸರು ಮಂಗಳೂರಿನ ಪಂಪ್‌ವೆಲ್‌ನಲ್ಲಿ ಹೈದರ್ ಅಲಿ ಎಂಬಾತನನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಆಗಿನಿಂದ ತನಿಖೆ ಆರಂಭವಾಗಿತ್ತು.

ಬಳಿಕ ನೈಜೀರಿಯಾದ ಪ್ರಜೆ ಪೀಟರ್ ಎಂಬಾತನನ್ನು ಬೆಂಗಳೂರಿನಲ್ಲಿ 6 ಕೋಟಿ ರೂ. ಮೌಲ್ಯದ MDMA ಜೊತೆಗೆ ಬಂಧಿಸಲಾಯಿತು. ದೆಹಲಿ ಮತ್ತು ಬೆಂಗಳೂರು ನಡುವಿನ ವಾಯು ಮಾರ್ಗಗಳನ್ನು ಬಳಸಿಕೊಂಡು ಕಳ್ಳಸಾಗಣೆ ಮಾಡುವ ಅಂತರರಾಷ್ಟ್ರೀಯ ಮಾದಕವಸ್ತು ಜಾಲದೊಂದಿಗೆ ಸಂಪರ್ಕ ಹೊಂದಿರುವುದು ತನಿಖೆಯಿಂದ ತಿಳಿದುಬಂದಿತು ಎಂದು ಅವರು ಹೇಳಿದರು.

ಗುಪ್ತಚರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮಾರ್ಚ್ 14 ರಂದು ಬೆಂಗಳೂರಿಗೆ ಆಗಮಿಸಿದ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳಾದ ಬಾಂಬಾ ಫ್ಯಾಂಟ್ (31) ಮತ್ತು ಅಬಿಗೈಲ್ ಅಡೋನಿಸ್ (30) ಅವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ
ಪೆಡ್ಲರ್'ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..! ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು!

ತನಿಖೆಯಲ್ಲಿ ಆರೋಪಿಗಳು ತಮ್ಮ ಟ್ರಾಲಿ ಬ್ಯಾಗ್‌ಗಳಲ್ಲಿ MDMA ಅನ್ನು ಮುಚ್ಚಿಟ್ಟಿರುವುದು ಪತ್ತೆಯಾಗಿದೆ. ಜೊತೆಗೆ ನಾಲ್ಕು ಮೊಬೈಲ್ ಫೋನ್‌ಗಳು, ಪಾಸ್‌ಪೋರ್ಟ್‌ಗಳು ಮತ್ತು 18,000 ರೂ. ನಗದು ಪತ್ತೆಯಾಗಿದೆ. ಬಂಧಿತರು ಬೆಂಗಳೂರು ಮತ್ತು ಇತರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೈಜೀರಿಯಾದ ಪೆಡ್ಲರ್‌ಗಳಿಗೆ ಮಾದಕವಸ್ತುಗಳನ್ನು ಪೂರೈಸುತ್ತಿದ್ದರು ಎಂದು ಪೊಲೀಸ್ ಮೂಲಗಳು ಸೂಚಿಸಿವೆ.

ಪ್ರಯಾಣಕ್ಕಾಗಿ ಅವರು ನಕಲಿ ಪಾಸ್‌ಪೋರ್ಟ್‌ಗಳು ಮತ್ತು ವೀಸಾಗಳನ್ನು ಬಳಸುತ್ತಿದ್ದಾರೆ ಎಂದು ಶಂಕಿಸಲಾಗಿದೆ. ಅಕ್ರಮ ಮಾದಕವಸ್ತು ಮಾರಾಟದ ಹಿಂದಿನ ದೊಡ್ಡ ಜಾಲವನ್ನು ಪತ್ತೆಹಚ್ಚಲು ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com