ಸರ್ಕಾರಿ ಆಸ್ಪತ್ರೆಯಲ್ಲಿ ಪೋಷಕರನ್ನು ತ್ಯಜಿಸುವ ಮಕ್ಕಳಿಗೆ ಮಾಡಿದ ಆಸ್ತಿ ವರ್ಗಾವಣೆ ರದ್ದುಗೊಳಿಸಿ: ಶರಣ ಪ್ರಕಾಶ ಪಾಟೀಲ್

ಅಧಿಕಾರಿಗಳ ಪ್ರಕಾರ, ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ, ಹಲವಾರು ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅವರ ಮಕ್ಕಳು ಬಿಟ್ಟು ಹೋಗುತ್ತಿದ್ದಾರೆ.
Karnataka Medical Education Minister Sharan Prakash Patil
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್
Updated on

ಬೆಂಗಳೂರು: ತಮ್ಮ ಹೆಸರಿಗೆ ಆಸ್ತಿಯನ್ನು ವರ್ಗಾಯಿಸಿದ ನಂತರ ಸರ್ಕಾರಿ ಆಸ್ಪತ್ರೆಗಳಲ್ಲಿ ಪೋಷಕರನ್ನು ಬಿಟ್ಟು ಹೋಗುವ ಪ್ರಕರಣಗಳಲ್ಲಿ ಮಕ್ಕಳ ಹೆಸರಿಗೆ ಆಗಿರುವ ವಿಲ್ ಮತ್ತು ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಭಾನುವಾರ ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ, ಹಲವಾರು ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅವರ ಮಕ್ಕಳು ಬಿಟ್ಟು ಹೋಗುತ್ತಿದ್ದಾರೆ.

'ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬಿಐಎಂಎಸ್) 150ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಬಿಟ್ಟಿರುವುದು ವರದಿಯಾಗಿದೆ. ರಾಜ್ಯದಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ 100ಕ್ಕೂ ಹೆಚ್ಚು ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ' ಎಂದು ಸಚಿವರ ಕಚೇರಿಯ ಹೇಳಿಕೆ ತಿಳಿಸಿದೆ.

ಇತ್ತೀಚೆಗೆ ನಡೆದ ಪರಿಶೀಲನಾ ಸಭೆಯಲ್ಲಿ, ಬಿಮ್ಸ್ ನಿರ್ದೇಶಕರು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ನಿರ್ದೇಶಕಿ (ಡಿಎಂಇ) ಡಾ. ಬಿಎಲ್ ಸುಜಾತಾ ರಾಥೋಡ್ ಅವರಿಗೆ ಎಲ್ಲ ಸಂಸ್ಥೆಗಳ ಮುಖ್ಯಸ್ಥರನ್ನು ಎಚ್ಚರಿಸುವಂತೆ ಮತ್ತು ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರುಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಪರಿತ್ಯಕ್ತ ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವಂತೆಯೂ ಸೂಚಿಸಿದ್ದಾರೆ.

Karnataka Medical Education Minister Sharan Prakash Patil
ಪೋಷಕರ ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲು ಇಲ್ಲ: ಸಚಿವ Krishna Byre Gowda

'ಆಹಾರ, ಬಟ್ಟೆ ಮತ್ತು ಆಶ್ರಯ ಸಿಗುತ್ತದೆ ಎಂದು ತಿಳಿದ ಮಕ್ಕಳು ತಮ್ಮನ್ನು ಆಸ್ಪತ್ರೆಗಳಲ್ಲಿ ಬಿಟ್ಟುಹೋಗಿದ್ದಾರೆ ಎಂದು ಅನೇಕ ಪೋಷಕರು ತಿಳಿಸಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳನ್ನು ಉಲ್ಲೇಖಿಸಿದ್ದಾರೆ. ಆದರೆ, ಹೆಚ್ಚಿನ ಪ್ರಕರಣಗಳಲ್ಲಿ ವೃದ್ಧ ಪೋಷಕರು ಆಸ್ತಿಗಳನ್ನು ತಮ್ಮ ಮಕ್ಕಳಿಗೆ ವರ್ಗಾಯಿಸಿದ ನಂತರವೇ ಅವರನ್ನು ಬಿಟ್ಟು ಹೋಗಿದ್ದಾರೆ. ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರಿಗೆ ಆಶ್ರಯ ವ್ಯವಸ್ಥೆ ಮಾಡಿದ್ದಾರೆ. ಆದರೆ, ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ' ಎಂದು ಹೇಳಿಕೆ ತಿಳಿಸಿದೆ.

ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007ರ ಅಡಿಯಲ್ಲಿ ಈ ಸಂಬಂಧ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳಲು ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ದೂರುಗಳನ್ನು ಸಲ್ಲಿಸಬೇಕು ಎಂದು ಪಾಟೀಲ್ ಹೇಳಿದರು.

Karnataka Medical Education Minister Sharan Prakash Patil
ಬಡವರಿಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ :ಶರಣ ಪ್ರಕಾಶ ಪಾಟೀಲ್

'ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಬೇಕು. ಅವರು ಹಾಗೆ ಮಾಡಲು ವಿಫಲವಾದರೆ, ತಮ್ಮ ಮಕ್ಕಳಿಗೆ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕನ್ನು ಪೋಷಕರು ಹೊಂದಿರುತ್ತಾರೆ' ಎಂದು ಅವರು ಹೇಳಿದರು.

ಕಾಯ್ದೆಯ ಸೆಕ್ಷನ್ 23ರ ಪ್ರಕಾರ, ಮಕ್ಕಳು ಆಸ್ತಿಯನ್ನು ಅನುವಂಶಿಕವಾಗಿ ಪಡೆದ ನಂತರ ತಮ್ಮ ಪೋಷಕರನ್ನು ನಿರ್ಲಕ್ಷ್ಯಿಸಿದರೆ ಅಥವಾ ತ್ಯಜಿಸಿದರೆ, ಈ ಕಾನೂನು ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ಪೋಷಕರಿಗೆ ಮತ್ತೆ ಮಾಲೀಕತ್ವ ನೀಡಲು ಅನುಮತಿ ನೀಡುತ್ತದೆ. ಇಂತಹ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಹಿರಿಯ ನಾಗರಿಕರಿಗೆ ನ್ಯಾಯ ಒದಗಿಸಲು ಮತ್ತು ಅವರ ಮಕ್ಕಳನ್ನು ಹೊಣೆಗಾರರನ್ನಾಗಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com