ಶೇ. 4ರಷ್ಟು ಮೀಸಲಾತಿ ಮುಸ್ಲಿಮರಿಗಷ್ಟೇ ಅಲ್ಲ, ಅಲ್ಪಸಂಖ್ಯಾತರು-ಹಿಂದುಳಿದವರಿಗೂ ಇದೆ: ರಾಜ್ಯ ಸರ್ಕಾರ ಸ್ಪಷ್ಟನೆ

ಅದರಲ್ಲಿ ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯದವರಲ್ಲ. ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಹಲವು ಧರ್ಮಗಳೂ ಬರುತ್ತವೆ.
DK Shivakumar in Assembly
ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಗುತ್ತಿಗೆಯಲ್ಲಿ ಮೀಸಲಾತಿ ಕೇವಲ ಮುಸ್ಲಿಂ ಸಮುದಾಯಕ್ಕಷ್ಟೇ ಸೀಮಿತವಾಗಿಲ್ಲ. ಅಲ್ಪಸಂಖ್ಯಾತ ಮತ್ತು ಹಿಂದುಳಿದವರಿಗೂ ಮೀಸಲಾತಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ವಿವಾದಕ್ಕೆ ಕಾರಣವಾಗಿ ರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಮುಸ್ಲಿಂ ಸಮುದಾಯದವರಿಗೆ ಮಾತ್ರ ಶೇ.4ರಷ್ಟು ಮೀಸಲಾತಿ ನೀಡಲಾಗುತ್ತಿದೆ ಎಂದು ಹೇಳಿದವರು ಯಾರು? ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೂ ಮೀಸಲಾತಿ ನೀಡಲಾಗುತ್ತಿದೆ. ಅದರಲ್ಲಿ ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯದವರಲ್ಲ. ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಹಲವು ಧರ್ಮಗಳೂ ಬರುತ್ತವೆ. ಈ ಹಿಂದೆ ಪರಿಶಿಷ್ಟ ಜಾತಿ/ಪಂಗಡದ ವರಿಗೆ ಗುತ್ತಿಗೆ ಮೀಸಲಾತಿ ನೀಡಲು ತಿದ್ದುಪಡಿ ಮಾಡಲಾಗಿತ್ತು. ಈಗ ಅದಕ್ಕೆ ಅಲ್ಪಸಂಖ್ಯಾತರು, ಹಿಂದುಳಿದವರನ್ನು ಸೇರಿಸಲಾಗುತ್ತಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರಿಗೆ 2 ಕೋಟಿ ರು. ಗುತ್ತಿಗೆ ಮೊತ್ತದಲ್ಲಿ ಮಾತ್ರ ಶೇ.4ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಅದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಸಾಧ್ಯವಿಲ್ಲ. ಈ ಕ್ರಮದಿಂದ ಬೇರೆ ಸಮುದಾಯದ ಹಕ್ಕು ಕಸಿಯುತ್ತಿಲ್ಲ. ಅಲ್ಪಸಂಖ್ಯಾತರೂ ಬದುಕಲು ನಾವು ಅನುಕೂಲ ಮಾಡಿಕೊಡಬೇಕಲ್ಲವೇ? ಈ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ನಮ್ಮನ್ನು ನೆನಪು ಮಾಡಿಕೊಳ್ಳದಿದ್ದರೆ ಆಗುವುದಿಲ್ಲ ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆಗೆ ಸರ್ಕಾರ ಖಂಡಿತವಾಗಿ ತಯಾರಾಗಿ ಇದೆ. ಎಷ್ಟು ದಿನ ನಾವು ತಪ್ಪಿಸಿಕೊಂಡು ಇರಲು ಸಾಧ್ಯ? ಶನಿವಾರ ಬೆಂಗಳೂರು ಮಹಾನಗರ ಪಾಲಿಕೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಸಭೆಯನ್ನು ಕರೆಯಲಾಗಿದೆ. ನಂತರ ಎಲ್ಲಾ ಪಕ್ಷದವರನ್ನು ಸಭೆಗೆ ಕರೆಯಲಾಗುವುದು. ಅವರಲ್ಲಿಯೂ ಕೆಲವೊಬ್ಬರು ಅನಧಿಕೃತವಾಗಿ ಬಿಬಿಎಂಪಿ ಚುನಾವಣೆ ಕುರಿತಾಗಿ ಸಲಹೆ ನೀಡಿದ್ದಾರೆ. ಈಗ ಅಧಿಕೃತವಾಗಿ ಸಲಹೆಗಳನ್ನು ಪಡೆಯಲಾಗುವುದು ಎಂದರು.

DK Shivakumar in Assembly
ಗುತ್ತಿಗೆಯಲ್ಲಿ ಮುಸ್ಲಿಂಮರಿಗೆ ಮೀಸಲಾತಿ: ಕರ್ನಾಟಕ ಸರ್ಕಾರದ ನಿರ್ಧಾರದ ಹಿಂದೆ ರಾಹುಲ್ ಕೈವಾಡ- ಬಿಜೆಪಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com