
ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರದ ಸತ್ಯಾಪುರ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಭೀಕರ ಜೋಡಿ ಕೊಲೆ ನಡೆದಿದ್ದು, ಸ್ಥಳೀಯರು ತೀವ್ರ ಆಘಾತಕ್ಕೀಡಾಗಿದ್ದಾರೆ.
ಮೃತರನ್ನು ಮಾಪಣ್ಣ (52) ಮತ್ತು ಅಲಿಸಾಬ (55) ಎಂದು ಗುರುತಿಸಲಾಗಿದ್ದು, ಬೆಳಿಗ್ಗೆ 8 ಗಂಟೆ ಸುಮಾರಿಗೆ ಶಹಾಪುರದಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಭೀಕರವಾಗಿ ಹತ್ಯೆ ಮಾಡಲಾಗಿದೆ.
ಶಹಾಪುರದಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಶಹಾಪುರದ ಸದ್ಯಾಪುರ ಗ್ರಾಮದ ಬಳಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮಾಪಣ್ಣ ಮತ್ತು ಅಲಿಸಾಬ ಎಂಬ ಇಬ್ಬರು ವ್ಯಕ್ತಿಗಳನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಅಪರಾಧಿಗಳನ್ನು ಪತ್ತೆಹಚ್ಚಲು ಶಹಾಪುರ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿರುವುದರಿಂದ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನೂ ಬಹಿರಂಗವಾಗಿಲ್ಲ.
Advertisement