
ದಾವಣಗೆರೆ: ದಾವಣಗೆರೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರುಪಾಲಾಗಿದ್ದಾರೆ. ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ದುಗ್ಗೇನಹಳ್ಳಿ ಗ್ರಾಮಗಳ ಬಳಿ ಬಟ್ಟೆ ತೊಳೆಯುತ್ತಿದ್ದಾಗ ಮಹಿಳೆಯೊಬ್ಬರು ನೀರಿಗೆ ಬಿದ್ದಿದ್ದಾರೆ. ಈ ವೇಳೆ ಆಕೆಯನ್ನು ರಕ್ಷಿಸಲು ಮುಂದಾದ ಮತ್ತಿಬ್ಬರು ಮಹಿಳೆಯರು ನೀರುಪಾಲಾಗಿದ್ದಾರೆ. ಮೃತರನ್ನು 28 ವರ್ಷದ ದೀಪಾ, 26 ವರ್ಷದ ದಿವ್ಯಾ ಮತ್ತು 19 ವರ್ಷದ ಚಂದನಾ ಎಂದು ಗುರುತಿಸಲಾಗಿದೆ. ಚನ್ನಗಿರಿ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅಗ್ನಿಶಾಮಕ ಸಿಬ್ಬಂದಿ ಮೂವರು ಮಹಿಳೆಯರ ಮೃತದೇಹಗಳನ್ನು ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Advertisement