ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ವಿಧಾನಸಭೆಯಲ್ಲಿ ಮಸೂದೆ ಮಂಡನೆ

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾನಸಭೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ(ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು.
ಎಚ್ ಕೆ ಪಾಟೀಲ್
ಎಚ್ ಕೆ ಪಾಟೀಲ್PTI
Updated on

ಬೆಂಗಳೂರು: ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾನಸಭೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ(ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು.

ಕಳೆದ ಶುಕ್ರವಾರ, ಸಚಿವ ಸಂಪುಟದಿಂದ ಅನುಮೋದನೆ ಪಡೆದಿದ್ದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಈಗಾಗಲೇ ಬಜೆಟ್‌ನಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿಯನ್ನು ಎಸ್‌ಸಿ-ಎಸ್‌ಟಿ, ಪ್ರವರ್ಗ 1, 2aಗಳ ಜತೆ 2b ಮುಸ್ಲಿಂ ವರ್ಗವನ್ನೂ ಸೇರಿಸಿ ಗುತ್ತಿಗೆ ಮೊತ್ತವನ್ನು 1 ಕೋಟಿಯಿಂದ 2 ಕೋಟಿ ರೂಗೆ ಏರಿಸುವ ಪ್ರಸ್ತಾಪ ಮಾಡಲಾಗಿತ್ತು. ಇವತ್ತು ಮಂಡನೆಯಾದ ಬಿಲ್ ನಲ್ಲಿ 2b ವರ್ಗಕ್ಕೆ ಶೇ.4 ಮೀಸಲಾತಿ ಕೊಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ(ಕೆಟಿಟಿಪಿ) ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ಎಚ್ ಕೆ ಪಾಟೀಲ್
ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ: 'ಅಸಂವಿಧಾನಿಕ ಕ್ರಮ', ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ- ತೇಜಸ್ವಿ ಸೂರ್ಯ

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ "ಅಸಂವಿಧಾನಿಕ" ಎಂದು ಟೀಕಿಸಿದೆ ಮತ್ತು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದು ಸೇರಿದಂತೆ ರದ್ದುಗೊಳಿಸುವವರೆಗೆ ಹೋರಾಟ ನಡೆಸುವುದಾಗಿ ಹೇಳಿದೆ.

ಮಂಗಳವಾರ ಮಂಡಿಸಲಾದ ಮಸೂದೆಯು 1999 ರ KTPP ಕಾಯ್ದೆಯನ್ನು ಮತ್ತಷ್ಟು ತಿದ್ದುಪಡಿ ಮಾಡುತ್ತದೆ, ಇದು 2025-26 ರ ಬಜೆಟ್ ಭಾಷಣದಲ್ಲಿ ವಿವರಿಸಿದ ಪ್ರಸ್ತಾವನೆಯನ್ನು ಅದರ ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆಯ ಪ್ರಕಾರ ಕಾರ್ಯಗತಗೊಳಿಸುತ್ತದೆ.

ಹಿಂದುಳಿದ ವರ್ಗಗಳ ನಿರುದ್ಯೋಗವನ್ನು ಪರಿಹರಿಸುವುದು ಮತ್ತು ಸರ್ಕಾರಿ ನಿರ್ಮಾಣ ಯೋಜನೆಗಳಲ್ಲಿ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಸೂದೆಯ ಉದ್ದೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com