ಮಳವಳ್ಳಿ ಕಲುಷಿತ ಆಹಾರ ಸೇವನೆ ಪ್ರಕರಣ: ಮತ್ತೋರ್ವ ವಿದ್ಯಾರ್ಥಿ ಸಾವು, ಮೃತರ ಸಂಖ್ಯೆ 2ಕ್ಕೆ ಏರಿಕೆ

ಶುಕ್ರವಾರ (ಮಾ.14) ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಡ್ಯ: ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ನಮೀಬ್ ಮಾಂತೆ ಮೃತ ವಿದ್ಯಾರ್ಥಿ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳ ಪೈಕಿ 6ನೇ ತರಗತಿ ವಿದ್ಯಾರ್ಥಿ, ಮೇಘಾಲಯದ ಕಿರ್ಶನ್‌ ಲ್ಯಾಂಗ್‌ (13) ಭಾನುವಾರ ಮೃತಪಟ್ಟಿದ್ದ.

ಶುಕ್ರವಾರ (ಮಾ.14) ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು. ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ಪಲಾವ್ ಮಾಡಿಸಲಾಗಿತ್ತು. ಉಳಿಕೆಯಾದ ಪಲಾವ್‌ ಅನ್ನು ಕಾಗೇಪುರದ ಗೋಕುಲ ವಿದ್ಯಾ ಸಂಸ್ಥೆಗೆ ಕಳುಹಿಸಲಾಗಿತ್ತು.

ಸಂಗ್ರಹ ಚಿತ್ರ
ಮಂಡ್ಯ: ಹೋಳಿ ಪಾರ್ಟಿಯಲ್ಲಿ ಊಟ ಸೇವಿಸಿ 28 ವಿದ್ಯಾರ್ಥಿಗಳು ಅಸ್ವಸ್ಥ, ಓರ್ವ ಸಾವು; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಈ ವಸತಿ ಶಿಕ್ಷಣ ಸಂಸ್ಥೆಯಾದ ಅಲ್ಲಿ ಮೇಘಾಲಯ ಹಾಗೂ ನೇಪಾಳ ಮೂಲದ ಮಕ್ಕಳು ಕಲಿಯುತ್ತಿದ್ದಾರೆ. ಊಟ ಸೇವಿಸಿದ್ದ ಮಕ್ಕಳು ಶನಿವಾರ ಬೆಳಿಗ್ಗೆ ಅಸ್ವಸ್ಥಗೊಂಡಿದ್ದರು. ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಮಕ್ಕಳಲ್ಲಿ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮಂಡ್ಯದ ಮಿಮ್ಸ್ ಮತ್ತು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಆಹಾರ ಪೂರೈಸಿದ ಹೋಟೆಲ್‌ಗೆ ಬೀಗ ಜಡಿದಿದ್ದಾರೆ. ಅಲ್ಲದೆ, ಹೋಟೆಲ್ ಮಾಲೀಕ, ಹಾಸ್ಟೆಲ್ ವಾರ್ಡರ್ ಮತ್ತು ಶಾಲಾ ನಿರ್ವಹಣಾ ಕಾರ್ಯದರ್ಶಿ ಸೇರಿದಂತೆ ಕೆಲವರನ್ನು ಬಂಧನಕ್ಕೊಳಪಡಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com