
ಬೆಂಗಳೂರು: ತಂದೆಯೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಈ ಘಟನೆ ನಡೆದಿದ್ದು, ಕಾಮುಕ ತಂದೆಯೋರ್ವ ತನ್ನ ಮಗಳ ಮೇಲೆಯೇ ನಿರತಂರ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಿರುವ ಮಹಿಳಾ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.
ಬಂಧಿತನನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಮಂಜುನಾಥ್ 19 ವರ್ಷದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ವೆಸಗುತ್ತಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೆ ಆರೋಪಿ ಮಂಜುನಾಥ್ ತನ್ನ ಕೃತ್ಯದ ಕುರಿತು ಯಾರಿಗಾದರೂ ಮಾಹಿತಿ ನೀಡಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದ ಎಂದು ಹೇಳಲಾಗಿದೆ.
ಅಪ್ಪನ ನೀಚ ಕೃತ್ಯಕ್ಕೆ ಬೇಸತ್ತು ಮನೆಬಿಟ್ಟಿದ್ದ ಯುವತಿ!
ಇನ್ನು ಸಂತ್ರಸ್ತ ಯುವತಿ ತಂದೆಯ ಭಯಕ್ಕೆ ಮನೆಬಿಟ್ಟು ಪಿಜಿ ಸೇರಿದ್ದಳು ಎಂಬ ವಿಚಾರ ಗೊತ್ತಾಗಿದೆ. ಆರೋಪಿ ಮಂಜುನಾಥ್ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ.
ತಂದೆಯ ಕಾಟ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ತಂದೆಯ ಭಯದಿಂದಲೇ ಸಂತ್ರಸ್ಥ ಯುವತಿಜೀವ ಭಯದಿಂದ ಯುವತಿ ಮನೆಯಿಂದ ದೂರ ಉಳಿದಿದ್ದಳು ಎಂದು ತಿಳಿದುಬಂದಿದೆ.
Advertisement