
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒನ್-ಟೈಮ್ ಸೆಟ್ಲ್‌ಮೆಂಟ್ (OTS) ಯೋಜನೆಯನ್ನು ಘೋಷಿಸಿದೆ.
ಈ ಹಿಂದೆ, OTS ಯೋಜನೆ ಎಲ್ಲರಿಗೂ ಮುಕ್ತವಾಗಿತ್ತು, ಆದರೆ, ವಿಧಾನಸೌಧ, ವಿಕಾಸಸೌಧ ಮತ್ತು ಇತರ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಯೋಜನೆ ಬಳಸಿಕೊಳ್ಳುವಲ್ಲಿ ವಿಫಲವಾಗಿತ್ತು. ಇದರಿಂದ ಕೋಟಿಗಟ್ಟಲೆ ಆಸ್ತಿ ತೆರಿಗೆ ಮತ್ತು ಸೇವಾ ಶುಲ್ಕಗಳನ್ನು ಬಾಕಿ ಉಳಿದಿವೆ.
ಹೀಗಾಗಿ ಸಮಸ್ಯೆ ಪರಿಹರಿಸಲು ಪಾಲಿಕೆ ಸರ್ಕಾರಿ ಕಟ್ಟಡಗಳಿಗೆ ಒಟಿಎಸ್ ಯೋಜನೆಯನ್ನು ಜಾರಿಗಾಳಿಸಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗೆ OTS ಅನ್ನು ನೀಡಲಾಗಿದ್ದು, ಯೋಜನೆ ದು ಮಾರ್ಚ್ 31 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಲಭ್ಯವಿರಲಿದೆ ಎಂದು ತಿಳಿಸಲಾಗಿದೆ.
ಆಸ್ತಿ ತೆರಿಗೆ ಬಾಕಿ ಹಿನ್ನೆಲೆಯಲ್ಲಿ ಈ ಹಿಂದೆ ರಾಜ್ಯ ಪ್ರಮುಖ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಮತ್ತು ರಾಜಭವನ ಸೇರಿದಂತೆ 250 ಕ್ಕೂ ಹೆಚ್ಚು ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿತ್ತು.
ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸುವಂತೆ ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಜ್ಞಾಪನೆ ಪತ್ರಗಳನ್ನು ಕಳುಹಿಸಲಾಗಿದೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪಾಲಿಕೆಯು ಎಂಟು ವಲಯಗಳಲ್ಲಿ ಹೆಚ್ಚಿನ ಆಸ್ತಿ ತೆರಿಗೆ ಬಾಕಿದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿತ್ತು.
Advertisement