
ಬೆಂಗಳೂರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 20ರವರೆಗೆ ರಣಬಿಸಿಲಿರಲಿದೆ ಎಂಬ ಮುನ್ಸೂಚನೆ ನೀಡುವೆಯೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ಹವಾಮಾನ ಕೇಂದ್ರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಏತನ್ಮಧ್ಯೆ, ಕಲಬುರಗಿಯ ಕೋಡ್ಲಿ ಹೋಬಳಿ ಮತ್ತು ರಾಯಚೂರು ಜಿಲ್ಲೆಗಳ ಕಲ್ಲೂರು ಹೋಬಳಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಪ್ರಕಾರ, ಕಲಬುರಗಿ, ರಾಯಚೂರು ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಹಲವೆಡೆ ಮತ್ತು ತುಮಕೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚೆ ದಾಖಲಾಗಿದೆ.
Advertisement