ಹೈಕೋರ್ಟ್ ಆದೇಶ: ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಬಿಡದಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ

ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ.
HD Kumaraswamy
ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.

ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ.

ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್​ಐಟಿ ರಚನೆ ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು.

14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.

ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್​​.ಡಿ ಕುಮಾರಸ್ವಾಮಿಯವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆಮಾಡಿಕೊಳ್ಳಲಾಗಿದೆ. ಈಗಾಗಲೇ ಹೆಚ್​ಡಿಕೆ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಬಂದು ನಿಂತಿವೆ.

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com