ಏಪ್ರಿಲ್ 4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ: ಶೀಘ್ರಗತಿಯಲ್ಲಿ ಕಾಮಗಾರಿ ಕಾರ್ಯ ಪೂರ್ಣಗೊಳಿಸಿ; ಅಧಿಕಾರಿಗಳಿಗೆ BBMP ಸೂಚನೆ

ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಅವರು ಅಧಿಕಾರಿಗಳು, ಧರ್ಮರಾಯಸ್ವಾಮಿ ದೇವಾಲಯ ಮತ್ತು ಬೆಂಗಳೂರು ಕರಗ ಸಮಿತಿಯ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಬೆಂಗಳೂರು ಕರಗ
ಬೆಂಗಳೂರು ಕರಗಸಂಗ್ರಹ ಚಿತ್ರ
Updated on

ಬೆಂಗಳೂರು: ಏ.4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು, ಇದಕ್ಕೂ ಮುನ್ನ ಕಾಮಗಾರಿ ಕಾರ್ಯ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ.

ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಅವರು ಅಧಿಕಾರಿಗಳು, ಧರ್ಮರಾಯಸ್ವಾಮಿ ದೇವಾಲಯ ಮತ್ತು ಬೆಂಗಳೂರು ಕರಗ ಸಮಿತಿಯ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಕರಗ ನಡೆಯುವ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಹತ್ತಿರದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಬಾಕಿ ಇರುವ ಕಾಮಗಾರಿಯನ್ನು ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮಾರ್ಚ್ ಅಂತ್ಯದ ವೇಳೆಗೆ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸೂಕ್ತ ಘನತ್ಯಾಜ್ಯ ನಿರ್ವಹಣಾ ಕಾರ್ಯವಿಧಾನವನ್ನು ಖಚಿತಪಡಿಸಿಕೊಳ್ಳುವಂತೆ, ನೀರು ಸರಬರಾಜು ಮತ್ತು ನೈರ್ಮಲ್ಯ ಸೌಲಭ್ಯಗಳಿಗೆ ಅವಕಾಶ ಕಲ್ಪಿಸಲು ಒತ್ತು ನೀಡುವಂತೆ ಸೂಚನೆ ನೀಡಿದರು.

ಇದೇ ವೇಳೆ ಉತ್ಸವದ ಸಮಯದಲ್ಲಿ ವೈದ್ಯಕೀಯ ತುರ್ತುಸ್ಥಿತಿಗಳನ್ನು ನಿರ್ವಹಿಸಲು ಸಾಕಷ್ಟು ವೈದ್ಯರು ಮತ್ತು ಇತರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಸಮಿತಿ ಸದಸ್ಯರಿಗೆ ಭರವಸೆ ನೀಡಿದರು.

ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಮಾತನಾಡಿ, ಕರಗ ಉತ್ಸವ ನಡೆಯುವ ರಸ್ತೆಗಳಲ್ಲಿನ ಬೀದಿ ದೀಪಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ, ಎಲ್ಲಾ ಕಡೆ ವಿದ್ಯುತ್ ದೀಪಗಳ ಅಳವಡಿಕೆ ವ್ಯವಸ್ಥೆ ಮಾಡಬೇಕು. ವಿದ್ಯುತ್ ಸಂಪರ್ಕ ಕಡಿತಗೊಳ್ಳದಂತೆ ಬೆಸ್ಕಾಂ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳುಬೇಕು, ಸ್ಥಳಗಳಲ್ಲಿ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಿದರು.

ಬೆಂಗಳೂರು ಕರಗ
ಏಪ್ರಿಲ್ 4 ರಿಂದ 14 ರವರೆಗೆ ಐತಿಹಾಸಿಕ ಬೆಂಗಳೂರು ಕರಗ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com