SCSP/TSP ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ, ವಿರೋಧ

ಗ್ಯಾರಂಟಿಗಳಿಗೆ ದಲಿತರ ಹಣ ನೀಡುವುದರಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಮೂಲ ಉದ್ದೇಶ ಈಡೇರಿದಂತೆ ಆಗುವುದಿಲ್ಲ.
ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ.
ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ.
Updated on

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಹೋರಾಟ ನಡೆಸುತ್ತಿದ್ದು, ಇದರ ನಡುವಲ್ಲೇ ಸಚಿವ ನಿವಾಸದಲ್ಲಿ ದಲಿತ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ.

ಗ್ಯಾರಂಟಿಗಳಿಗೆ ದಲಿತರ ಹಣ ನೀಡುವುದರಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಮೂಲ ಉದ್ದೇಶ ಈಡೇರಿದಂತೆ ಆಗುವುದಿಲ್ಲ. ಹಾಗಾಗಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡದಂತೆ ಮನವಿ ಮಾಡಲು ನಾಯಕರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ನಡೆದ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ಚರ್ಚಿಸಿ, ಸರ್ಕಾರವು ಹಣವನ್ನು ಬೇರೆಡೆಗೆ ತಿರುಗಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಸರ್ಕಾರವು ಹಣ ಬೇರೆಡೆಗೆ ತಿರುಗಿಸಿದ ಅನುದಾನವನ್ನು ಅದೇ ಸಮುದಾಯಗಳ ಫಲಾನುಭವಿಗಳಿಗೆ ಬಳಸುತ್ತಿದೆ ಎಂದು ಹೇಳಿಕೊಂಡಿರಬಹುದು, ಆದರೆ ಅದನ್ನು ದೃಢೀಕರಿಸಲು ಯಾವುದೇ ದತ್ತಾಂಶವಿಲ್ಲ ಎಂದು ಶಾಸಕರು ಸಭೆಯಲ್ಲಿ ತಿಳಿಸಿದರು.

ಬಜೆಟ್‌ನಲ್ಲಿ ಅಲ್ಪಸಂಖ್ಯಾತರು ಮತ್ತು ಒಬಿಸಿಗಳಿಗೆ ಹಂಚಿಕೆಯಾದ ಅನುದಾನವನ್ನು ಸಮುದಾಯಗಳ ಫಲಾನುಭವಿಗಳಿಗೆ ನಿಧಿಗಾಗಿ ಬಳಸುತ್ತಿಲ್ಲ. ಆದರೆ, ಎಸ್‌ಸಿ/ಎಸ್‌ಟಿಗಳನ್ನೇಕೆ ಹಗುರವಾಗಿ ಪರಿಗಣಿಸಿದೆ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ.
ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿ ಆಡಳಿತದ ರಾಜ್ಯಗಳು, ವಿಶ್ವಸಂಸ್ಥೆ ಮೆಚ್ಚುಗೆ: ಸಿಎಂ ಸಿದ್ದರಾಮಯ್ಯ

ಅಲ್ಲದೆ, ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬಳಿಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನಗಳನ್ನು ಗ್ಯಾರಂಟಿ ಮತ್ತು ಇತರ ಯೋಜನೆಗಳಿಗೆ ಬಳಸಬಾರದು, ಕನಿಷ್ಠ ಶೇಕಡ 40 ರಷ್ಟು ಅನುದಾನವನ್ನು ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಬಳಸಿಕೊಳ್ಳಬೇಕು ಎಂದು ಒತ್ತಾಯಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಈ ಸಭೆಯನ್ನು ಬಜೆಟ್'ಗೂ ಮುನ್ನವೇ ನಡೆಸಬೇಕಿತ್ತು. ಸಿಎಂ ಮೇಲೆ ಒತ್ತಡ ಹೇರಲು ಇದು ಸಹಾಯ ಮಾಡುತ್ತಿತ್ತು. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಶಾಸಕರೊಬ್ಬರು ತಿಳಿಸಿದ್ದಾರೆ.

ಸಭೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಮೂಲಕ ಹೊಸ ಕಲ್ಯಾಣ ಯೋಜನೆಗಳನ್ನು ರೂಪಿಸುವ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಎಸ್‌ಸಿ ಸಮುದಾಯದ ಒಳಮೀಸಲಾತಿಯ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದ ಎಂದು ಹೇಳಿದ್ದಾರೆ.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಆನೇಕಲ್ ಶಾಸಕ ಬಿ.ಶಿವಣ್ಣ, ಪುಲಿಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ್ ಅವರು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com