ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಹಾರಾಟ: ಎರಡು ವರ್ಷಗಳಲ್ಲಿ 31 ಕೋಟಿ ರೂ.ಗೂ ಹೆಚ್ಚು ವೆಚ್ಚ!

ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣಕ್ಕೆ 2023-24ರಲ್ಲಿ 12.65 ಕೋಟಿ ರೂ. ಮತ್ತು 2024-25ರಲ್ಲಿ, ಜನವರಿ 15 ರವರೆಗೆ. 19.35 ಕೋಟಿ ರೂ. ವೆಚ್ಚ ಮಾಡಲಾಗಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣದ ಪ್ರೀತಿ ರಾಜ್ಯದ ಜನತೆ ಹುಬ್ಬೇರುವಂತೆ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಹಾರಾಟಕ್ಕೆ ಸರ್ಕಾರಿ ಬೊಕ್ಕಸದಿಂದ 31 ಕೋಟಿ ರೂಪಾಯಿ ಗೆಚ್ಚು ವೆಚ್ಚವಾಗಿದೆ.

ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣಕ್ಕೆ 2023-24ರಲ್ಲಿ 12.65 ಕೋಟಿ ರೂ. ಮತ್ತು 2024-25ರಲ್ಲಿ, ಜನವರಿ 15 ರವರೆಗೆ. 19.35 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಸದನಕ್ಕೆ ತಿಳಿಸಿದೆ.

ಇನ್ನೂ ಆಶ್ಚರ್ಯಕರ ಸಂಗತಿಯೆಂದರೆ, ಬೆಂಗಳೂರಿನಿಂದ ಕೇವಲ 1.5 ಗಂಟೆ ಪ್ರಯಾಣದಂತಹ ಮೈಸೂರಿನ ಹತ್ತಿರದ ಸ್ಥಳಗಳಿಗೂ ಸಿಎಂ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ್ದಾರೆ.

ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದ ಹದ್ದು: ತಪ್ಪಿದ ಅನಾಹುತ

ಸರ್ಕಾರವು ಸದನದಲ್ಲಿ ಮಂಡಿಸಿದ ದಾಖಲೆಗಳ ಪ್ರಕಾರ, ಮೈಸೂರಿಗೆ ಹೆಲಿಕಾಪ್ಟರ್ ಪ್ರಯಾಣಕ್ಕೆ 10.85 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದೆ.

ಇಂದು ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಎಂಎಲ್‌ಸಿ ಟಿ.ಎನ್. ಜವರಾಯಿಗೌಡ ಅವರು ಸಿಎಂ ಬುಕ್ ಮಾಡಿದ ಜೆಟ್‌ಗಳು ಮತ್ತು ವಿಮಾನಗಳ ಕುರಿತು ಕೇಳಿದ ಪ್ರಶ್ನೆಗೆ ಈ ವಿವರಗಳನ್ನು ನೀಡಲಾಗಿದೆ.

ಸರ್ಕಾರವು ಸದನದಲ್ಲಿ ಮಂಡಿಸಿದ ದಾಖಲೆಗಳ ಪ್ರಕಾರ, ಸಿದ್ದರಾಮಯ್ಯ ಅವರು ವಾಣಿಜ್ಯ ವಿಮಾನಯಾನ ಸಂಸ್ಥೆಗಳಿಂದ ಉತ್ತಮ ಸಂಪರ್ಕ ಹೊಂದಿರುವ ದೆಹಲಿ ಮತ್ತು ಚೆನ್ನೈನಂತಹ ನಗರಗಳಿಗೆ ಚಾರ್ಟರ್ ವಿಮಾನಗಳನ್ನು ಬುಕ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com