ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ.
BJP MLA Basanagouda Patil Yatnal
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Updated on

ವಿಜಯಪುರ: ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಲಿದ್ದು, ಈ ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು.

ಸದನದಲ್ಲಿ ವಿಧೇಯಕ ಮಂಡನೆಯಾಗ ಬೆನ್ನಲ್ಲೇ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ವಿನಂತಿಸಿದ್ದಾರೆ.

ಸಾರ್ವಜನಿಕ ಒಪ್ಪಂದಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿಯನ್ನು ನೀಡಲು ಕರ್ನಾಟಕ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ, ಇದು ಸಂವಿಧಾನದ ತತ್ವಗಳಿಗೆ ವಿರುದ್ಧವಾಗಿದೆ. ಕೆಟಿಪಿಪಿ ಕಾಯ್ದೆಯಲ್ಲಿನ ತಿದ್ದುಪಡಿಯು ರೂ.2 ಕೋಟಿವರೆಗಿನ ನಾಗರಿಕ ಒಪ್ಪಂದಗಳು ಮತ್ತು ರೂ.1 ಕೋಟಿವರೆಗಿನ ಸರಕು ಮತ್ತು ಸೇವಾ ಒಪ್ಪಂದಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿಯನ್ನು ಅನುಮತಿಸುತ್ತದೆ. ಕೆಟಿಪಿಪಿ ಕಾಯ್ದೆಯನ್ನು ಕಳೆದ ವಾರ ಕರ್ನಾಟಕ ಸಚಿವ ಸಂಪುಟ ತಿದ್ದುಪಡಿ ಮಾಡಿ ಅನುಮೋದಿಸಿದೆ.

BJP MLA Basanagouda Patil Yatnal
ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ: 'ಅಸಂವಿಧಾನಿಕ ಕ್ರಮ', ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ- ತೇಜಸ್ವಿ ಸೂರ್ಯ

15ನೇ ವಿಧಿಯು ರಾಜ್ಯವು ಧರ್ಮ ಮತ್ತು ಜಾತಿ ಎರಡರ ಆಧಾರದ ಮೇಲೆ ನಾಗರಿಕರ ವಿರುದ್ಧ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ. ಸಂವಿಧಾನ ರಚನೆಯ ಸಮಯದಲ್ಲಿ, ಡಾ. ಅಂಬೇಡ್ಕರ್ ಸ್ವತಃ ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸಿದ್ದರು. ವಿವಿಧ ರಾಜ್ಯಗಳಲ್ಲಿ, ಧರ್ಮಾಧಾರಿತ ಮೀಸಲಾತಿಯನ್ನು ಒದಗಿಸುವ ಇದೇ ರೀತಿಯ ಪ್ರಯತ್ನಗಳನ್ನು ನ್ಯಾಯಾಲಯಗಳು ವಿಫಲಗೊಳಿಸಿವೆ. ಇದರ ಹೊರತಾಗಿಯೂ, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಮೂಲಕ ಮತಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ.

ಸುಪ್ರೀಂ ಕೋರ್ಟ್ ಕೂಡ ಧರ್ಮಾಧಾರಿತ ಮೀಸಲಾತಿಯನ್ನು ರದ್ದುಗೊಳಿಸಿದೆ. ಮೀಸಲಾತಿ ಸೌಲಭ್ಯಗಳಿಗಾಗಿ 77 ಸಮುದಾಯಗಳನ್ನು, ಮುಸ್ಲಿಮರನ್ನು, ಒಬಿಸಿ ಎಂದು ವರ್ಗೀಕರಿಸುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಮುಸ್ಲಿಂ ಸಮುದಾಯಗಳಿಗೆ ಒಬಿಸಿ ವರ್ಗೀಕರಣವನ್ನು ರದ್ದುಗೊಳಿಸುವ ಕೋಲ್ಕತ್ತಾ ಹೈಕೋರ್ಟ್‌ನ ನಿರ್ಧಾರವನ್ನು ಪ್ರಶ್ನಿಸಿದ ಪಶ್ಚಿಮ ಬಂಗಾಳ ಸರ್ಕಾರದ ಒಂದು ಅರ್ಜಿ ಸೇರಿದಂತೆ ಹಲವಾರು ಅರ್ಜಿಗಳನ್ನು ಆಲಿಸುವಾಗ ಸುಪ್ರೀಂ ಕೋರ್ಟ್ ಈ ನಿರ್ಧಾರವನ್ನು ಪ್ರಕಟಿಸಿದೆ.

ಧರ್ಮಾಧಾರಿತ ಮೀಸಲಾತಿ ನ್ಯಾಯಾಂಗ ಪರಿಶೀಲನೆಯಲ್ಲಿದೆ, ಆದ್ದರಿಂದ ಈ ಮಸೂದೆಗೆ ಒಪ್ಪಿಗೆ ನೀಡಬಾರದು, ಇದು ಸಂವಿಧಾನಬಾಹಿರ, ಯಾವುದೇ ಕಲ್ಯಾಣ ಉದ್ದೇಶವಿಲ್ಲದ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಬೇಕು . ನಾಗರಿಕ ಒಪ್ಪಂದಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಕ್ರಮವು ರಾಷ್ಟ್ರೀಯ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತ್ವವನ್ನು ಅಪಾಯಕ್ಕೆ ಸಿಲುಕಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com