
ಬೆಂಗಳೂರು: ವೈಭವ್ ಹೋಟೆಲ್ನ ಸಪ್ಲೈಯರ್ ಬ್ಯಾಗ್‌ನಲ್ಲಿ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದನ್ನು ಕಂಡು ಆತಂಕಗೊಂಡ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಗ್ರೆನೇಡ್ ಮತ್ತು ಸಪ್ಲೈಯರ್ ಅಬ್ದುಲ್ ರೆಹಮಾನ್ ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರಿನ ವೈಭವ್ ಹೋಟೆಲ್ ನಲ್ಲಿ ಅಬ್ದುಲ್ ರೆಹಮಾನ್ ಎಂಬಾತ ಸೆಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದನು. ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಅಬ್ದುಲ್ ಹೇಳಿಕೊಂಡಿದ್ದನು. ಈ ವೇಳೆ ಹೋಟೆಲ್ ಸಿಬ್ಬಂದಿ ಆಧಾರ ಕಾರ್ಡ್ ತೋರಿಸುವಂತೆ ಕೇಳಿದ್ದಾರೆ. ಅಬ್ದುಲ್ ಆಧಾರ್ ಕಾರ್ಡ್ ತೋರಿಸದೆ ಸತಾಯಿಸಿದ್ದನು. ಇದರಿಂದ ಎಚ್ಚೆತ್ತ ಸಿಬ್ಬಂದಿ ಶೆಡ್ನಲ್ಲಿದ್ದ ರೆಹಮಾನ್ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಪತ್ತೆಯಾಗಿತ್ತು.
ಸದ್ಯ ವಶಕ್ಕೆ ಪಡೆದಿರುವ ಗ್ರನೇಡ್ ಅನ್ನು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಇನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಅಬ್ಧುಲ್ ರೆಹಮಾನ್ ನ ತೀವ್ರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಬ್ದುಲ್ ಬಾಂಬ್ ಮಾದರಿಯ ವಸ್ತು ರಸ್ತೆಯಲ್ಲಿ ಸಿಕ್ಕಿತ್ತು ಎಂದು ಹೇಳಿದ್ದಾನೆ ಎನ್ನಲಾಗಿದೆ. ಸದ್ಯ ಸಂಪಿಗೆಹಳ್ಳಿ ಪೊಲೀಸರು ಅಬ್ದುಲ್ ರೆಹಮಾನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಗ್ರೆನೇಡ್ ಎಲ್ಲಿ ಇತ್ತು? ಅದು ಹೇಗೆ ಸಿಕ್ತು? ಅದನ್ನ ಏಕೆ ತೆಗೆದುಕೊಂಡುಬಂದಿದ್ದ? ಏನಾದರೂ ಬ್ಲಾಸ್ಟ್ ಮಾಡುವ ಪ್ಲ್ಯಾನ್ ಏನಾದರೂ ಇತ್ತಾ? ಹೀಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.
Advertisement