ಕನಕಪುರ: ಮಗುವಿಗೆ ಚಾಕುವಿನಿಂದ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ಅಂಗನವಾಡಿ ಸಹಾಯಕಿ ಕ್ರೌರ್ಯ

ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ದೀಕ್ಷಿತ್ ತಾಯಿ ಚೈತ್ರಬಾಯಿ ಅಂಗನವಾಡಿ ಬಳಿ ಹೋದಾಗ ಮಗು ಅಳುತ್ತಿರುವುದನ್ನು ಗಮನಿಸಿ ವಿಚಾರಿಸಿದಾಗ, ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್‌ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ.
Representational image
ಸಾಂದರ್ಭಿಕ ಚಿತ್ರ
Updated on

ಕನಕಪುರ: ಎರಡೂವರೆ ವರ್ಷದ ಮಗುವಿಗೆ ಅಂಗನವಾಡಿ ಸಹಾಯಕಿ ಒಬ್ಬರು ಚಾಕುವಿನಿಂದ ಬರೆ ಹಾಕಿ ಡೈಪರ್ ಗೆ ಖಾರದಪುಡಿ ಹಾಕಿ ಕ್ರೌರ್ಯ ಮೆರೆದಿರುವ ಆರೋಪ ಕೇಳಿಬಂದಿದೆ.

ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಜ್ಯೋತಿ ಮತ್ತು ರಮೇಶ್ ನಾಯ್ಕ್ ಅವರ ಮಗ ದೀಕ್ಷಿತ್ (2.5) ಸಂತ್ರಸ್ತ ಬಾಲಕ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಕ್ಷಿತ್ ಎಂಬ ಮಗುವಿನ ಮೇಲೆ ಅಮಾನವೀಯತೆಯಿಂದ ಕೈ ಮೇಲೆ ಕಾದ ಚಾಕುವಿನಿಂದ ಬರೆ ಹಾಕಿದ್ದಲ್ಲದೆ ಡೈಪರ್ ಗೆ ಖಾರದಪುಡಿ ಹಾಕಿದ್ದಾಳೆ.

ಮಂಗಳವಾರ ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ದೀಕ್ಷಿತ್ ತಾಯಿ ಚೈತ್ರಬಾಯಿ ಅಂಗನವಾಡಿ ಬಳಿ ಹೋದಾಗ ಮಗು ಅಳುತ್ತಿರುವುದನ್ನು ಗಮನಿಸಿ ವಿಚಾರಿಸಿದಾಗ, ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್‌ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ ಎಂದು ದೂರಲಾಗಿದೆ.

ಕೃತ್ಯ ಎಸಗಿದ ಅಂಗನವಾಡಿ ಸಹಾಯಕಿ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಮೇಲಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಸಿಡಿಪಿಒ ವಿ.ನಾರಾಯಣ್‌ ತಿಳಿಸಿದ್ದಾರೆ. ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಚಂದ್ರಮ್ಮ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮನೆಯಲ್ಲಿನ ಒತ್ತಡದಿಂದ ಮಗುವಿಗೆ ಈ ರೀತಿ ಮಾಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಅಂಗನವಾಡಿ ಸಹಾಯಕಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Representational image
ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com