
ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಮದ್ದೂರಮ್ಮ ಜಾತ್ರೆಯ ತೇರು ಉರುಳಿಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಎರಡು ಕುರ್ಜುಗಳು ಧರೆಗೆ ಉರುಳಿಬಿದ್ದಿದ್ದು, ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು.
150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಇದಾಗಿದ್ದು, . ತೇರು ಎಳೆದು ತರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮದ್ದೂರಮ್ಮ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಅತೀ ಎತ್ತರ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಾರೆ. ಗಾಳಿ ಸಹಿತ ಮಳೆಯ ಕಾರಣದಿಂದಾಗಿ ತೇರು ಧರೆಗೆ ಉರುಳಿದೆ.
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುರ್ಜು ನಿಧಾನವಾಗಿ ಉರುಳಿದ್ದರಿಂದ ಅಪಾಯವನ್ನರಿತ ಭಕ್ತರು ಅವಘಡದಿಂದ ತಪ್ಪಿಸಿಕೊಂಡಿದ್ದಾರೆ. ಈ ಹಿಂದೆ ರಾಯಸಂದ್ರದ ಕುರ್ಜು ಉರುಳಿ ಬಿದ್ದಿತ್ತು, ಕಳೆದ ವರ್ಷ ಮತ್ತೊಂದು ಕುರುಜು ಉರುಳಿದ್ದನ್ನು ನೆನಪಿಸಬಹುದಾದರೂ ಆಗಲೂ ಯಾರಿಗೂ ಏನೂ ಆಗದಂತೆ ದೇವಿ ಕಾಪಾಡಿದ್ದಳು ಎನ್ನುವುದೇ ಎಲ್ಲರ ನಂಬಿಕೆಯಾಗಿದೆ.
Advertisement