ಶಿವಮೊಗ್ಗ: ಸಿಬ್ಬಂದಿಯಿಂದಲೇ ಲಂಚ ಪಡೆಯುತ್ತಿದ್ದ ಡಿವೈಎಸ್ಪಿ ಲೋಕಾಯುಕ್ತ ಬಲೆಗೆ!

ತಮ್ಮ ಅಧೀನದಲ್ಲಿ ಕೆಲಸ ಮಾಡುವ ಸಹಾಯಕ ಹೆಡ್ ಕಾನ್‌ಸ್ಟೆಬಲ್ ಅವರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಕೃಷ್ಣಮೂರ್ತಿ ಅವರು ಸಿಕ್ಕಿಬಿದ್ದಿದ್ದಾರೆ.
ಕೃಷ್ಣಮೂರ್ತಿ ಟಿ ಪಿ
ಕೃಷ್ಣಮೂರ್ತಿ ಟಿ ಪಿ
Updated on

ಶಿವಮೊಗ್ಗ: ತಮ್ಮ ಇಲಾಖೆಯ ಪೊಲೀಸ್ ಸಿಬ್ಬಂದಿಯಿಂದಲೇ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ(ಡಿಎಆರ್) ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿವೈಎಸ್ಪಿ) ಕೃಷ್ಣಮೂರ್ತಿ ಟಿ ಪಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ತಮ್ಮ ಅಧೀನದಲ್ಲಿ ಕೆಲಸ ಮಾಡುವ ಸಹಾಯಕ ಹೆಡ್ ಕಾನ್‌ಸ್ಟೆಬಲ್ ಅವರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಕೃಷ್ಣಮೂರ್ತಿ ಅವರು ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೂರಿನ ಪ್ರಕಾರ, ಪ್ರಸನ್ನ ಕುಮಾರ್ ಟಿ ಎಸ್(35) ಕಳೆದ ಒಂದೂವರೆ ವರ್ಷಗಳಿಂದ ಭದ್ರಾವತಿ ತಾಲ್ಲೂಕು ಖಜಾನೆಯಲ್ಲಿ ಖಜಾನೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಮತ್ತು ರಜೆ ಸಂಬಂಧಿತ ಅನುಮೋದನೆಗಾಗಿ ಕೃಷ್ಣಮೂರ್ತಿ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಲಂಚವನ್ನು ಶಿವಮೊಗ್ಗ ಡಿಎಆರ್‌ನ ಸಹಾಯಕ ಮೀಸಲು ಸಬ್-ಇನ್‌ಸ್ಪೆಕ್ಟರ್(ಎಆರ್‌ಎಸ್‌ಐ) ರವಿ ಎಂ ಕೆ ಅವರಿಗೆ ಹಸ್ತಾಂತರಿಸಬೇಕಾಗಿತ್ತು.

ಕೃಷ್ಣಮೂರ್ತಿ ಟಿ ಪಿ
ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20,000 ರೂ ನಗದು ಪತ್ತೆ

ಲಂಚ ನೀಡಲು ಇಷ್ಟವಿಲ್ಲದ ಕುಮಾರ್, ಹಣ ಕೇಳುತ್ತಿರುವ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 7 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ ಮಧ್ಯಾಹ್ನ 2:31 ಕ್ಕೆ, ಶಿವಮೊಗ್ಗ ಡಿಎಆರ್ ಪೊಲೀಸ್ ಕ್ವಾರ್ಟರ್ಸ್‌ನಲ್ಲಿರುವ ಅವರ ನಿವಾಸದಲ್ಲಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣವನ್ನು ವಶಪಡಿಸಿಕೊಂಡು ಕೃಷ್ಣಮೂರ್ತಿ ಮತ್ತು ರವಿಯನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಚೌಧರಿ ಎಂ ಎಚ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಪಿ ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com