ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ, ತುಂಡುಡುಗೆ ತೊಟ್ಟರೆ ದೇಹವನ್ನ ಹಾವು-ಚೇಳು ತಿನ್ನುತ್ತವೆ: ಬಾಲಕಿ ವಿಡಿಯೋ ವೈರಲ್; ತನಿಖೆಗೆ ಆದೇಶ

ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿರುವ ಓರ್ವ ವಿದ್ಯಾರ್ಥಿನಿ ತಯಾರಿಸಿರುವ ವಿಷಯ ಮಾದರಿ ಮತ್ತು ಅದಕ್ಕೆ ಆಕೆ ನೀಡುವ ವಿವರಣೆಯ ವಿಡಿಯೋ ವೈರಲ್​ ಆಗಿದೆ.
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿವರಣೆ ನೀಡುತ್ತಿರುವ ಬಾಲಕಿ.
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿವರಣೆ ನೀಡುತ್ತಿರುವ ಬಾಲಕಿ.
Updated on

ಮೈಸೂರು: ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ, ತುಂಡು ಉಡುಗೆ ತೊಟ್ಟರೆ ನರಕಕ್ಕೆ ಹೋಗುವುದರ ಜೊತೆಗೆ ನಿಮ್ಮ ದೇಹವನ್ನ ಹಾವು ಚೇಳು ತಿನ್ನುತ್ತವೆ ಎಂಬ ವಿದ್ಯಾರ್ಥಿನಿಯೊಬ್ಬಳು ನೀಡಿರುವ ಹೇಳಿಕೆ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿರುವ ಓರ್ವ ವಿದ್ಯಾರ್ಥಿನಿ ತಯಾರಿಸಿರುವ ವಿಷಯ ಮಾದರಿ ಮತ್ತು ಅದಕ್ಕೆ ಆಕೆ ನೀಡುವ ವಿವರಣೆಯ ವಿಡಿಯೋ ವೈರಲ್​ ಆಗಿದೆ. ಬಾಲಕಿಯು ಧರ್ಮದ ಕುರಿತಂತೆ ಮಾತನಾಡಿರುವ ದೃಶ್ಯಾವಳಿ ವೈರಲ್ ಆಗುತ್ತಿದೆ.

ವಿದ್ಯಾರ್ಥಿನಿ ಎರಡು ಗೊಂಬೆಗಳನ್ನು ಶವದ ರೀತಿ ಮಲಗಿಸಿದ್ದು, ಒಂದು ಗೊಂಬೆಯನ್ನು ಕಪ್ಪು ಬಟ್ಟೆಯಿಂದ ಮುಚ್ಚಿದ್ದು, ಮತ್ತೊದ್ದು ಗೊಂಬೆಯನ್ನು ಚೇಳಿನ ಚಿತ್ರವಿರುವ ಬಟ್ಟೆಯಿಂದ ಮುಚ್ಚಿದ್ದಾಳೆ. ಇದಕ್ಕೆ ವಿದ್ಯಾರ್ಥಿನಿ ವಿವರಣೆಯನ್ನೂ ಕೂಡ ನೀಡಿದ್ದಾಳೆ.

ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ. ತುಂಡು ಉಡುಗೆ ತೊಟ್ಟರೆ ನರಕಕ್ಕೆ ಹೋಗುವುದರ ಜೊತೆಗೆ ನಿಮ್ಮ ದೇಹವನ್ನ ಹಾವು, ಚೇಳು ತಿನ್ನುತ್ತವೆ” ಎಂದು ವಿದ್ಯಾರ್ಥಿನಿ ವಿವರಣೆ ನೀಡಿದ್ದಾಳೆ.

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿವರಣೆ ನೀಡುತ್ತಿರುವ ಬಾಲಕಿ.
ಹೊಸ ವರ್ಷದಿಂದ ಈ ದೇಶದಲ್ಲಿ ಬುರ್ಖಾ ನಿಷೇಧ: ಸಿಕ್ಕಿಬಿದ್ದರೆ 1 ಲಕ್ಷ ರೂ ದಂಡ; ಮುಸ್ಲಿಂ ಸಮುದಾಯದಲ್ಲಿ ಆಕ್ರೋಶ!

ಈ ದೃಶ್ಯಗಳನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ವಿಡಿಯೋ ಕುರಿತು ಹಲವು ಟೀಕೆಗಳು ವ್ಯಕ್ತವಾಗುತ್ತಿದೆ.

ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ವಿವರಣೆ ಕೋರಿ ಖಾಸಗಿ ಶಾಲೆಗೆ ನೋಟಿಸ್ ನೀಡಿದೆ. ಅಲ್ಲದೆ, ಬ್ಲಾಕ್ ಶಿಕ್ಷಣಾಧಿಕಾರಿಗೂ ವರದಿ ನೀಡುವಂತೆ ಸೂಚಿಲಿದೆ. ಆದರೆ, ನೋಟಿಸ್'ಗೆ ಶಾಲೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ.

ಚಾಮರಾಜನಗರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅವರು ಮಾತನಾಡಿ,ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಿಚಾರಣೆಗೆ ಸಹಕರಿಸುತ್ತಿಲ್ಲ, ವಿದ್ಯಾರ್ಥಿನಿ ಖಾಸಗಿ ಶಾಲೆಯವರು ಎಂದು ಬಿಇಒ ದೃಢಪಡಿಸಿದ್ದಾರೆ. ಆದರೆ, ವಸ್ತು ಪ್ರದರ್ಶನ ತಮ್ಮ ಶಾಲೆಯಲ್ಲಿ ನಡೆದಿಲ್ಲ ಎಂದು ಹೇಳಿದ್ದಾರೆಂದು ತಿಳಿಸಿದ್ದಾರೆ.

ಹೀಗಾಗಿ ವಿಡಿಯೋ ಪರಿಶೀಲನೆಗೆ ಎರಡು ತಂಡ ರಚನೆ ಮಾಡಲಾಗಿದೆ. ಶಾಲೆಗೆ ಎರಡು ತಂಡ ಕಳುಹಿಸಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಆಡಳಿತ ಮಂಡಳಿ, ಶಿಕ್ಷಕರನ್ನು ವಿಚಾರಣೆ ಮಾಡಬೇಕು, ಯಾವ ಸ್ಥಳದಲ್ಲಿ ಮಾತನಾಡಿದ್ದಾರೆ, ಅದರ ಹಿನ್ನಲೆ ಏನು ಎಂಬುದರ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com