ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಪನ್ನೀರ್ ನಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ

ಇತ್ತೀಚೆಗೆ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ಹಿಟ್ಟು ಬೇಯಿಸುವುದು, ಹಸಿರು ಬಣ್ಣ ಹಾಕಿಟ್ಟ ಬಟಾಣಿ ಕಾಳುಗಳು ತಿನ್ನಲು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿತ್ತು.
ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಪನ್ನೀರ್ ನಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ
Updated on

ಬೆಂಗಳೂರು: ಆಹಾರ ಕಲಬೆರಕೆಯ ಆರೋಪ ಸಾಕಷ್ಟು ಕೇಳಿಬರುತ್ತಿರುವ ಹೊತ್ತಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಐಸ್ ಕ್ರೀಂ ಮತ್ತು ತಂಪು ಪಾನೀಯ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಬೇಸಿಗೆಯಲ್ಲಿ ಐಸ್ ಕ್ರೀಂ, ತಂಪು ಪಾನೀಯಗಳಿಗೆ ಮುಗಿಬೀಳುವ ಜನರು ಹೆಚ್ಚು. ಬೇಸಿಗೆ ಹಿನ್ನೆಲ್ ಅಲರ್ಟ್ ಆಗಿರುವ ಅಧಿಕಾರಿಗಳು ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಎಫ್​ಎಸ್​ಎಸ್​ಎಐ ದಾಳಿ ಮಾಡಿದೆ. ನಗರದ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಆಹಾರ ಇಲಾಖೆ‌ ಅಧಿಕಾರಿಗಳು ಸ್ಯಾಂಪಲ್ ಕಲೆಕ್ಟ್ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಇತ್ತೀಚೆಗೆ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ಹಿಟ್ಟು ಬೇಯಿಸುವುದು, ಹಸಿರು ಬಣ್ಣ ಹಾಕಿಟ್ಟ ಬಟಾಣಿ ಕಾಳುಗಳು ತಿನ್ನಲು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿತ್ತು.

ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಪನ್ನೀರ್ ನಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ
ಇಡ್ಲಿ ತಯಾರಿಕೆಗೆ ಪ್ಲ್ಯಾಸ್ಟಿಕ್ ಶೀಟ್ ಬಳಕೆ: ನಗರದ ಜನಪ್ರಿಯ ಹೋಟೆಲ್ ಗಳಲ್ಲಿ ಬೇಡಿಕೆ ಕುಸಿತ..!

ಖುಷಿಯಿಂದ ತಿನ್ನುವ ಪನ್ನೀರ್ ಕೂಡ ಡೇಂಜರ್!

ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆಗಳ ಆರೋಪ ಕೇಳಿಬರುತ್ತಿದ್ದು, ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್​ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ. ಆ ಮೂಲಕ ಪನ್ನೀರ್​​​​​ ಪ್ರಿಯರಿಗೆ ಆಹಾರ ಇಲಾಖೆ ಶಾಕ್​ ನೀಡಿದೆ.

ಪನ್ನೀರ್​ನಲ್ಲಿ ಅಸುರಕ್ಷಿತ ಅಂಶ ಪತ್ತೆ

ಕಲಬೆರಕೆ ಹಿನ್ನೆಲೆ ಕಳೆದ ಹಲವು ದಿನಗಳ ಹಿಂದೆ ಬೆಂಗಳೂರು ಸೇರಿ ಹಲವೆಡೆ ಆಹಾರ ಇಲಾಖೆ ಪನ್ನೀರ್​ ಸ್ಯಾಂಪಲ್ ಸಂಗ್ರಹಿಸಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನ್ನೀರ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಅಸುರಕ್ಷಿತ ಅಂಶ ಪತ್ತೆಯಾಗಿದೆ.

ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಪನ್ನೀರ್ ನಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ
ಇಡ್ಲಿ ಬಳಿಕ ಹಸಿರು ಬಟಾಣಿ ಪರೀಕ್ಷೆ ನಡೆಸಿದ ಆರೋಗ್ಯ ಇಲಾಖೆ: ಕೃತಕ ಬಣ್ಣ ಬಳಕೆಯಿಂದ ಅನಾರೋಗ್ಯ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com