KSRTC: ಯುಗಾದಿ, ರಂಜಾನ್ ಹಬ್ಬಕ್ಕೆ 2,000 ಹೆಚ್ಚುವರಿ ಬಸ್‌ ವ್ಯವಸ್ಥೆ

ಮಾರ್ಚ್ 30 ಮತ್ತು 31 ರಂದು ಕ್ರಮವಾಗಿ ಯುಗಾದಿ ಮತ್ತು ರಂಜಾನ್ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು, ಮಾರ್ಚ್ 28 ರಿಂದ 30 ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ.
KSRTC
ಕೆಎಸ್ ಆರ್ ಟಿಸಿ (ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ 2,000 ಹೆಚ್ಚುವರಿ ಬಸ್‌ಗಳನ್ನು ಓಡಿಸುವುದಾಗಿ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಬುಧವಾರ ತಿಳಿಸಿದೆ.

ಮಾರ್ಚ್ 30 ಮತ್ತು 31 ರಂದು ಕ್ರಮವಾಗಿ ಯುಗಾದಿ ಮತ್ತು ರಂಜಾನ್(ಈದ್ ಉಲ್-ಫಿತರ್) ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು, ಮಾರ್ಚ್ 28 ರಿಂದ 30 ರವರೆಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸಲು ಅಸ್ತಿತ್ವದಲ್ಲಿರುವ ವೇಳಾಪಟ್ಟಿಗಳ ಜೊತೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಂತರ, ಮಾರ್ಚ್ 31 ರಂದು ರಾಜ್ಯ ಮತ್ತು ಅಂತರರಾಜ್ಯ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳನ್ನು ಓಡಿಸಲಾಗುವುದು ಎಂದು ಕೆಎಸ್ಆರ್ ಟಿಸಿ ತಿಳಿಸಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಇರಲಿದೆ.

KSRTC
ಯುಗಾದಿ-ರಂಜಾನ್ ಪ್ರಯುಕ್ತ ವಾರಾಂತ್ಯ ರಜೆ; ಊರುಗಳಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ಸುಗಳ ಟಿಕೆಟ್ ದರ ದುಪ್ಪಟ್ಟು

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಸಾರಿಗೆ ಸಂಸ್ಥೆಯ ಪ್ರತಿಷ್ಠಿತ ಬಸ್‌ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com