ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾಗೆ ಜಾಮೀನು ನಿರಾಕರಿಸಿದ ಸೆಷನ್ಸ್ ಕೋರ್ಟ್; ನಟಿಗೆ ಜೈಲೇ ಗತಿ

ಈ ಮುಂಚೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನ ಅರ್ಜಿಯನ್ನು ವಜಾಗೊಳಿಸಿತ್ತು.
ನಟಿ ರನ್ಯಾ ರಾವ್
ನಟಿ ರನ್ಯಾ ರಾವ್
Updated on

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಗುರುವಾರ ವಜಾಗೊಳಿಸಿದೆ.

ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ಮುಂಚೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನ ಅರ್ಜಿಯನ್ನು ವಜಾಗೊಳಿಸಿತ್ತು. ಈಗ ​ಸೆಷನ್ಸ್ ಕೋರ್ಟ್ ಸಹ ನಟಿಗೆ ಜಾಮೀನು ನಿರಾಕರಿಸಿದೆ. ರನ್ಯಾ ರಾವ್ ಈಗ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

ನಟಿ ರನ್ಯಾ ರಾವ್
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

ರನ್ಯಾ ರಾವ್ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ಅವರು ವಾದ ಮಂಡಿಸಿದರೆ, ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಪರವಾಗಿ ವಕೀಲ ಮಧು ರಾವ್ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಕೋರ್ಟ್​ ಇಂದು ರನ್ಯಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com