
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ನಡೆದಿದೆ. ಪತಿಯೇ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭೀಕರ ಘಟನೆ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಬೆಂಗಳೂರಿನ ಕನ್ನಹಳ್ಳಿಯಲ್ಲಿ ನೆಲೆಸಿತ್ತು. ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಆದರೆ ಗೌರಿ ಅನಿಲ್ ನನ್ನು ರಾಕೇಶ್ ಹತ್ಯೆ ಮಾಡಿದ್ದಾನೆ. ನಂತರ ದೇಹವನ್ನು ಏನು ಮಾಡಬೇಕು ಎಂದು ತೋಚದೆ ತಂಡುಗಳಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ ಈ ವಿಚಾರವನ್ನು ಮಹಾರಾಷ್ಟ್ರದಲ್ಲಿರುವ ಪತ್ನಿಯ ಪೋಷಕರಿಗೆ ತಿಳಿಸಿದ್ದಾನೆ. ಈ ವಿಚಾರ ತಿಳಿದು ಆತಂಕಗೊಂಡ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ದೂರಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಹುಳಿಮಾವು ಪೊಲೀಸರಿಗೆ ದೂರು ರವಾನಿಸಿದ್ದಾರೆ. ನಂತರ ಬೆಂಗಳೂರು ಪೊಲೀಸರು ಮನೆಗೆ ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಸಹ ಭೇಟಿ ಪರಿಶೀಲನೆ ನಡೆಸಿದ್ದಾರೆ.
Advertisement