
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ತನಿಖಾ ವಿಭಾಗದ (ಸಿಐಡಿ) ಅಧಿಕಾರಿಗಳು ತಮ್ಮ ತಂದೆಯನ್ನು 'ಹನಿಟ್ರ್ಯಾಪ್' ಮಾಡಲು ಯತ್ನಿಸಿದ ಆರೋಪದ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಮತ್ತು ಕಾಂಗ್ರೆಸ್ ಎಂಎಲ್ಸಿ ಕೆ ಎನ್ ರಾಜೇಂದ್ರ ಹೇಳಿದರು.
ತಮ್ಮ ಮೇಲೆ ನಡೆದಿರುವ "ಕೊಲೆ" ಯತ್ನದ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲು ಕರ್ನಾಟಕ ಡಿಜಿಪಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಇಂದು ಭೇಟಿಯಾಗಿದ್ದಾಗಿ ರಾಜೇಂದ್ರ ತಿಳಿಸಿದರು.
'ಹನಿಟ್ರ್ಯಾಪ್' ಪ್ರಯತ್ನಗಳ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ನಾನು ನಂಬುತ್ತೇನೆ. ಸಿಐಡಿ ಇಲ್ಲಿನ ಜಯಮಹಲ್ ರಸ್ತೆಯಲ್ಲಿರುವ (ರಾಜಣ್ಣ ಅವರಿಗೆ ಹಂಚಿಕೆಯಾಗಿರುವ) ಸರ್ಕಾರಿ ಮನೆಗೆ ಭೇಟಿ ನೀಡಿ ಸಿಬ್ಬಂದಿಯನ್ನು ಪ್ರಶ್ನಿಸಿತು. ಅವರು ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದಾರೆ-ಇದು ನನ್ನ ಬಳಿ ಇರುವ ಮಾಹಿತಿ" ಎಂದು ರಾಜೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಕರಣವನ್ನು ಸಿಐಡಿಗೆ ವಹಿಸಿರುವುದರಿಂದ, ಅವರು ಇಂದು ತಮ್ಮ ತನಿಖೆಯನ್ನು ಪ್ರಾರಂಭಿಸಿದರು: "ಇದು ಗೃಹ ಸಚಿವರಿಗೆ ಸಲ್ಲಿಸಿದ ಅರ್ಜಿಯನ್ನು ಆಧರಿಸಿದೆ" ಎಂದು ತಿಳಿಸಿದ್ದಾರೆ.
ಮಂಗಳವಾರ, ರಾಜಣ್ಣ ಅವರು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿ, ತಮ್ಮನ್ನು "ಹನಿಟ್ರ್ಯಾಪ್" ಮಾಡಲು ನಡೆದಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದರು.
ರಾಜಣ್ಣ ಅವರ ಅರ್ಜಿಯನ್ನು ಸರ್ಕಾರ ಕಾನೂನಿನ ಚೌಕಟ್ಟಿನೊಳಗೆ ಪರಿಶೀಲಿಸಿ, ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಮುಖ್ಯಮಂತ್ರಿಯೊಂದಿಗೆ ಚರ್ಚಿಸಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಪರಮೇಶ್ವರ ಹೇಳಿದ್ದಾರೆ.
Advertisement