
ಬೆಂಗಳೂರು: ಬೆಂಗಳೂರಿನಲ್ಲಿ ಪತ್ನಿ ಹತ್ಯೆ ಮಾಡಿ, ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿದ್ದ 32 ವರ್ಷದ ಮಹಿಳೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪುಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಪತಿ ಜತೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಮಹಾರಾಷ್ಟ್ರ ಮೂಲದ ಗೌರಿ ಖೇಡೇಕರ್ ಅವರ ಮೃತದೇಹ ಗುರುವಾರ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿತ್ತು.
ಪತ್ನಿ ಕೊಲೆ ಮಾಡಿದ ನಂತರ ಪತಿ ರಾಕೇಶ್ ರಾಜೇಂದರ ಖೇಡೇಕರ್ ಪುಣೆಗೆ ಪರಾರಿಯಾಗಿದ್ದು, ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪತ್ನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಮಹಾರಾಷ್ಟ್ರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು, ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆಯ ಪತಿ ಮಾತ್ರ ಪ್ರಮುಖ ಆರೋಪಿ ಎಂದು ತಿಳಿದುಬಂದಿದೆ.
"ಪತಿ ರಾಕೇಶ್ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದು, ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಸದ್ಯ ಆಸ್ಪತ್ರೆಯಲ್ಲಿದ್ದಾರೆ ಮತ್ತು ನಮ್ಮ ತಂಡ ಈಗಾಗಲೇ ಪುಣೆ ಪೊಲೀಸರನ್ನು ಸಂಪರ್ಕಿಸಿದೆ" ಎಂದು ಅವರು ಹೇಳಿದರು.
ಬೆಂಗಳೂರು ಪೊಲೀಸರ ತಂಡ, ಪುಣೆಗೆ ಹೋಗಿದ್ದು, ಆರೋಪಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ವಿಚಾರಣೆಗಾಗಿ ಇಲ್ಲಿಗೆ ಕರೆತರಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಕೊಲೆಗೆ ವೈವಾಹಿಕ ಕಲಹ ಕಾರಣ ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ಬೆಂಗಳೂರಿಗೆ ಬಂದಿದ್ದು, ಅವರಿಂದ ಹೆಚ್ಚಿನ ವಿವರಗಳನ್ನು ಪಡೆಯಲಾಗುವುದು ಎಂದು ಅವರು ಹೇಳಿದರು.
Advertisement