ಕೊಡಗಿನಲ್ಲಿ ಒಂದೇ ಕುಟುಂಬದ ‌ನಾಲ್ವರ ಭೀಕರ ಹತ್ಯೆ; ಅನೈತಿಕ ಸಂಬಂಧ ಶಂಕೆ

ಕೇರಳ ಮೂಲದ ಗಿರೀಶ್(35) ಎಂಬಾತ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನೂ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಘಟನೆ ನಡೆದ ಮನೆಯ ದೃಶ್ಯ.
ಘಟನೆ ನಡೆದ ಮನೆಯ ದೃಶ್ಯ.
Updated on: 

ಕೊಡಗು: ಒಂದೇ ಕುಟುಂಬದ ‌ನಾಲ್ವರವನ್ನು ಭೀಕರವಾಗಿ ಹತ್ಯೆ ಮಾಡಿರುವ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ.

ಕೇರಳ ಮೂಲದ ಗಿರೀಶ್(35) ಎಂಬಾತ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ನಾಲ್ವರನ್ನೂ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಗಿರೀಶ್ ತನ್ನ ಮಾವ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5)ಯನ್ನು ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಏಳು ವರ್ಷಗಳ ಹಿಂದೆ ಗಿರೀಶ್ ಹಾಗೂ ನಾಗಿ ವಿವಾಹವಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಸರಣಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದ ಮನೆಯ ದೃಶ್ಯ.
ಬೆಂಗಳೂರು: ಪತ್ನಿ ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿದ್ದ ಪ್ರಕರಣ; ಪತಿ ಆತ್ಮಹತ್ಯೆಗೆ ಯತ್ನ

ನಾಗಿಯೊಂದಿಗೆ ಗಿರೀಶ್ ಮೂರನೇ ಮದುವೆಯಾಗಿ ತೋಟದ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿದ ಹಣದ ವಿಚಾರಕ್ಕಾಗಿ ನಾಲ್ವರ ನಡುವೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆಯಲ್ಲೂ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com