ಸಿದ್ದಗಂಗಾ ಮಠದ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಡಿ.ಕೆ ಶಿವಕುಮಾರ್!

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ, ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಜನಾಥ್ ಸಿಂಗ್ ಮತ್ತು ಡಿ.ಕೆ ಶಿವಕುಮಾರ್
ರಾಜನಾಥ್ ಸಿಂಗ್ ಮತ್ತು ಡಿ.ಕೆ ಶಿವಕುಮಾರ್
Updated on

ತುಮಕೂರು: ಏಪ್ರಿಲ್ 1 ರಂದು ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ 118 ನೇ ಜನ್ಮ ದಿನಾಚರಣೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ರಾಜನಾಥ್ ಸಿಂಗ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ, ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ, ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇತ್ತೀಚೆಗೆ ಸದ್ಗುರು ಜಗ್ಗಿ ವಾಸುದೇವ್ ಅವರ ಆಹ್ವಾನದ ಮೇರೆಗೆ ಕೊಯಮತ್ತೂರಿನಲ್ಲಿ ನಡೆದ ಮಹಾಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಣಕಾಲಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಡಿಸಿಎಂ ಅವರಿಗೆ ಅವಕಾಶ ಸಿಕ್ಕಿದೆ. "ವಾಸ್ತವವಾಗಿ, ಏಪ್ರಿಲ್ 4 ರಂದು ನಿಗದಿಯಾಗಿದ್ದ ಶ್ರೀಗಳ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಬರಲು ಸಿದ್ಧರಾಗಿದ್ದರು. ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಮುರ್ಮು ಅವರ ಭಾಗವಹಿಸುವಿಕೆ ದೃಢೀಕರಿಸದ ಕಾರಣ, ಆಯೋಜಕರು ಕಾರ್ಯಕ್ರಮವನ್ನು ಏಪ್ರಿಲ್ 1 ಕ್ಕೆ ಮುಂದೂಡಿದರು ಎಂದು ಮೂಲಗಳು ತಿಳಿಸಿವೆ.

ರಾಜನಾಥ್ ಸಿಂಗ್ ಮತ್ತು ಡಿ.ಕೆ ಶಿವಕುಮಾರ್
ಕಾಂಗ್ರೆಸ್ ಪಕ್ಷ ಬಲಪಡಿಸಲು ಎಐಸಿಸಿ ಹೊಸ ಸೂತ್ರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com