
ವಿಜಯನಗರ: ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು 71 ಎಕರೆ 30 ಗಂಟೆ ಗೋಮಾಳ ಜಮೀನನನ್ನು ಒತ್ತುವರಿ ಮಾಡಿಕೊಂಡಿರುವುದಾಗಿ ಸಮಾಜ ಪರಿವರ್ತನ ಸಮುದಾಯದ ಅಧ್ಯಕ್ಷ ಎಸ್. ಆರ್. ಹಿರೇಮಠ ಹೇಳಿದ್ದಾರೆ.
ಕುಮಾರಸ್ವಾಮಿ, ಡಿ. ಸಿ. ತಮ್ಮಣ್ಣ, ಸಂಸದ ಡಾ. ಸಿ.ಎನ್. ಮಂಜುನಾಥ್ ಸೇರಿದಂತೆ ಕುಟುಂಬದ ಇತರ ಸದಸ್ಯರು ಒತ್ತುವರಿ ಮಾಡಿಕೊಂಡಿರುವ 71 ಎಕರೆ 30 ಗುಂಟೆ ಗೋಮಾಳವನ್ನು ಸರ್ಕಾರ ತಕ್ಷಣ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಅವರೆಲ್ಲರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಒತ್ತುವರಿಗೆ ನೆರವಾದ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಒತ್ತುವರಿ ಕುರಿತು ಕರ್ನಾಟಕ ಹೈಕೋರ್ಟ್ ನ 21 ಆದೇಶಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕುಮಾರಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವುದನ್ನು ಹಿರೇಮಠ ಸ್ವಾಗತಿಸಿದರು.
Advertisement