ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು

ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
ಅನುಪಮ್ ಅಗರ್ವಾಲ್(ಸಂಗ್ರಹ ಚಿತ್ರ)
ಅನುಪಮ್ ಅಗರ್ವಾಲ್(ಸಂಗ್ರಹ ಚಿತ್ರ)
Updated on

ಮಂಗಳೂರು: ಮಂಗಳೂರಿನ ಕುಡುಪುನಲ್ಲಿ ಇತ್ತೀಚೆಗೆ ನಡೆದ ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಕಲಿ ಮತ್ತು ಪ್ರಚೋದನಕಾರಿ ವಿಷಯ ಪೋಸ್ಟ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕುಡುಪು ಬಳಿ ಇತ್ತೀಚೆಗೆ ನಡೆದ ದಿನಗೂಲಿ ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

"ಅಶಾಂತಿ ಸೃಷ್ಟಿಸುವ ಮತ್ತು ಕೋಮು ಸಾಮರಸ್ಯವನ್ನು ಕೆಡಿಸುವ ಉದ್ದೇಶದಿಂದ, ಕೆಲವು ವ್ಯಕ್ತಿಗಳು ಮತ್ತು ಗುಂಪುಗಳು ನಕಲಿ ಸುದ್ದಿ ಮತ್ತು ಪ್ರಚೋದನಕಾರಿ ವಿಷಯ ಹರಡಿದ್ದಾರೆ. ಕುಡುಪು ಘಟನೆಯಲ್ಲಿ ಬಳಸಲಾದ ಕೊಲೆ ಬ್ಯಾಟ್ ಸ್ಟಂಪ್ ವಶಪಡಿಸಿಕೊಳ್ಳಲಾಗಿದೆ ಎಂದು "BEARY MUSLIM ARMY" ಎಂಬ ವಾಟ್ಸಾಪ್ ಗುಂಪಿನಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡ ಪೋಸ್ಟ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ 2023 ರ ಭಾರತೀಯ ನ್ಯಾಯ ಸಂಹಿತಾ (BNS) ನ ಸೆಕ್ಷನ್ 192, 353(1), 353(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಅಗರ್ವಾಲ್ ತಿಳಿಸಿದ್ದಾರೆ.

ಅನುಪಮ್ ಅಗರ್ವಾಲ್(ಸಂಗ್ರಹ ಚಿತ್ರ)
ಮಂಗಳೂರು: ಕ್ರಿಕೆಟ್ ಪಂದ್ಯದ ವೇಳೆ ಜಗಳ; ಗುಂಪು ಹಲ್ಲೆಗೆ ಯುವಕ ಬಲಿ, 15 ಜನರ ಬಂಧನ

"beary-royal-nawab" ಎಂಬ ಇನ್‌ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕರ ದಾರಿತಪ್ಪಿಸುವ ಉದ್ದೇಶದಿಂದ ಅಪ್‌ಲೋಡ್ ಮಾಡಲಾದ ಅದೇ ಘಟನೆಗೆ ಸಂಬಂಧಿಸಿದ ಸುಳ್ಳು ಮಾಹಿತಿಯ ವಿರುದ್ಧ BNS, 2023 ರ ಸೆಕ್ಷನ್ 353(2) ರ ಅಡಿಯಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ" ಎಂದು ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಕಲಿ ಮತ್ತು ಪ್ರಚೋದನಕಾರಿ ವಿಷಯದ ವಿರುದ್ಧ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ 2023 ರ BNS ಸೆಕ್ಷನ್ 353(1)(b) ರ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ "ಮೈಕಲ್ಲೋ ಬ್ಯಾರಿ" ಎಂಬ ವಾಟ್ಸಾಪ್ ಗುಂಪಿನಲ್ಲಿ ಪ್ರಸಾರವಾದ ಸಂದೇಶದಲ್ಲಿ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೇನ್ ಎಂಬುವವರನ್ನು ಆರೋಪಿ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

"ಮಂಗಳೂರು ನಗರ ಪೊಲೀಸರು ನಗರದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಖಚಿತಪಡಿಸಿಕೊಳ್ಳಲು ಬದ್ಧರಾಗಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ಮಾಹಿತಿ ಹರಡುವವರ ಅಥವಾ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com