Mangaluru: ಹಿಂದೂಪರ ಕಾರ್ಯಕರ್ತನ ಹತ್ಯೆ; ಕ್ಯಾಮೆರಾದಲ್ಲಿ ಭೀಕರ ದಾಳಿ ಸೆರೆ!

ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದ್ದು, ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Hindu Activist Suhas Shetty Murderd Near Bajpe
ಸುಹಾಸ್ ಶೆಟ್ಟಿ ಸಾವು
Updated on

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್​ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದರು.

ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ. ಸುಹಾಸ್​ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ‌‌.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ‌ ಕಾಮತ್ ಆಗಮಿಸಿದ್ದಾರೆ.

ಇನ್ನು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Hindu Activist Suhas Shetty Murderd Near Bajpe
Heavy rains in Bengaluru: ಕತ್ರಿಗುಪ್ಪೆಯಲ್ಲಿ ಮರ ಬಿದ್ದು ಆಟೋ ಚಾಲಕ ಸಾವು!

ಪೊಲೀಸರ ಮಾಹಿತಿ

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿದ್ದು, 'ಈ ಘಟನೆ ರಾತ್ರಿ 8.27 ರ ಸುಮಾರಿಗೆ ನಡೆದಿದೆ. ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ಕೆಎ-12-ಎಂಬಿ-3731 ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಹಾಶ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ. 5 ರಿಂದ 6 ಜನರಿದ್ದ ದುಷ್ಕರ್ಮಿಗಳು ಸುಹಾಶ್ ಶೆಟ್ಟಿ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದರು. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದರು.

ನಾಕಾಬಂದಿ

ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳೂರು ಹಲವೆಡೆ ನಾಕಾಬಂದಿ ಹಾಕಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾಕಂದ್ರೆ ಕೊಲೆಯಾದ ಸುಹಾಸ್ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರ ಪಡೆಯನ್ನು ಹೊಂದಿದ್ದ. ಹೀಗಾಗಿ ಪೊಲೀಸರು ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ.

ಕ್ಯಾಮೆರಾದಲ್ಲಿ ಭೀಕರ ದಾಳಿ ಸೆರೆ!

ಇನ್ನು ಸುಹಾಶ್ ಶೆಟ್ಟಿಯನ್ನು ದುಷ್ಕರ್ಮಿಗಳ ಅಟ್ಟಾಡಿಸಿ ಕೊಲೆಗೈದ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋವನ್ನು ಬಿಜೆಪಿ ನಾಯಕ ಸುನಿಲ್ ಕುಮಾರ್ ಕಾರ್ಕಳ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಫಾಜಿಲ್ ಹತ್ಯೆಯಲ್ಲಿ ಸುಹಾಸ್ ಆರೋಪಿ

ಬಜರಂಗದಳದೊಂದಿಗೆ ಸಂಬಂಧ ಹೊಂದಿರುವ ಸುಹಾಸ್, ಜುಲೈ 2022 ರಂದು ಸುರತ್ಕಲ್‌ನಲ್ಲಿ ಫಾಜಿಲ್‌ನನ್ನು ಕಡಿದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್‌ನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸುಹಾಸ್ ಹಲವಾರು ಕೊಲೆ ಮತ್ತು ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಆತನ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com