ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ: ಬಿಜೆಪಿಯಿಂದ 25 ಲಕ್ಷ ರೂ ಪರಿಹಾರ ಘೋಷಣೆ!

ಕಳೆದ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು.
ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ: ಬಿಜೆಪಿಯಿಂದ 25 ಲಕ್ಷ ರೂ ಪರಿಹಾರ ಘೋಷಣೆ!
Updated on

ಮಂಗಳೂರು: ಕಳೆದ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇಂದು ಕಾರಿಂಜದಲ್ಲಿ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ ನಡೆಸಿದ್ದು ಬಿಜೆಪಿ ನಾಯಕರಾದ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಸಿಟಿ ರವಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಅಂತ್ಯಕ್ರಿಯೆಗೂ ಮುನ್ನ ಅಂತಿಮ ಯಾತ್ರೆಯನ್ನು ನಡೆಸಲಾಯಿತು.

ಮಂಗಳೂರಿನ ಆಸ್ಪತ್ರೆಯಿಂದ ಕಾರಿಂಜದವರೆಗೆ ನಡೆದ ಅಂತಿಮ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದು ದಾರಿಯುದ್ದಕ್ಕೂ ಹಿಂದೂ ಸಂಘಟನೆ ಕಾರ್ಯಕರ್ತರು ಪುಷ್ಪನಮನ ಸಲ್ಲಿಸಿದರು. ಸುಹಾಸ್ ಹತ್ಯೆ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ಆಗಬೇಕು. ಸರ್ಕಾರಕ್ಕೆ ಮನುಷ್ಯತ್ವ ಇದ್ದರೆ, ಈ ಬಡ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು.

ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ: ಬಿಜೆಪಿಯಿಂದ 25 ಲಕ್ಷ ರೂ ಪರಿಹಾರ ಘೋಷಣೆ!
ಸುಹಾಸ್ ಶೆಟ್ಟಿಗೆ ಬೆದರಿಕೆ ಇತ್ತು, ಹಂತಕರ ಮುಖಗಳ ಗುರುತು ಪತ್ತೆ: ಮಂಗಳೂರು ನಗರ ಪೊಲೀಸ್ ಆಯುಕ್ತ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com