ಚಾಮರಾಜನಗರ, ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ

ಸುರಕ್ಷತಾ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕಚೇರಿಯಿಂದ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದ್ದಾರೆ.
Chamarajanagar, Raichur DC office gets bomb threat
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಪಾಸಣೆonline desk
Updated on

ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಇ-ಮೇಲ್ ಗೆ ಬೆದರಿಕೆ ಸಂದೇಶ ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದೇ ಮಾದರಿಯಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೂ ಬಾಂಬ್ ಬೆದರಿಕೆ ಮೇಲ್ ಬಂದಿದೆ.

Chamarajanagar, Raichur DC office gets bomb threat
ಕೇರಳ ಸಿಎಂ ಕಚೇರಿ, ರಾಜಭವನ, ಕೊಚ್ಚಿ ವಿಮಾನ ನಿಲ್ದಾಣ ಟಾರ್ಗೆಟ್: ಮತ್ತೆ ಬಾಂಬ್ ಬೆದರಿಕೆ

ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಬಾಂಬ್ ಶೋಧಕಾರ್ಯದಲ್ಲಿ ತೊಡಗಿದೆ. ಮೇಲ್ ಕಳಿಸಿರುವ ಕಿಡಿಗೇಡಿಯ ಐಪಿ ವಿಳಾಸ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಎಸ್ ಪಿ ಮಾಹಿತಿ ನೀಡಿದ್ದಾರೆ.

ಸುರಕ್ಷತಾ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕಚೇರಿಯಿಂದ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದ್ದಾರೆ.

ಇದೇ ಮಾದರಿಯಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೂ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಬಾಂಬ್ ಶೋಧಕಾರ್ಯದಲ್ಲಿ ತೊಡಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com