ಸುಹಾಸ್ ಹತ್ಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ; ರಾಜ್ಯ ಶಾಂತಿಯಿಂದ ಇರಲು ಸಹಕರಿಸಿ: ಬಿಜೆಪಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

"ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ” ಎಂದರು.
Dk Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ” ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

Dk Shivakumar
ಸುಹಾಸ್ ಶೆಟ್ಟಿ ಹತ್ಯೆ ಕೇಸ್‌ನಲ್ಲಿ ತುಷ್ಟೀಕರಣ ಸಾಧ್ಯವೇ ಇಲ್ಲ: ದಿನೇಶ್ ಗುಂಡೂರಾವ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com