ಚಿಕ್ಕೋಡಿ: ಈಜಲು ಹೋಗಿದ್ದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ದುರ್ಮರಣ

ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಚಿಕ್ಕೋಡಿ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮೇ 3ರ ಶನಿವಾರ ನಡೆದಿದೆ.

ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಮಾಹಿತಿ ಪೊಲೀಸರಿಗೆ ಸ್ಥಳೀಯರಿಂದ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ರವಾನಿಸುವ ಕಾರ್ಯವನ್ನು ಪೊಲೀಸರು ಮಾಡಿದ್ದಾರೆ.

Representational image
ಹಾಸಿಗೆ ತಯಾರಿಕಾ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಾವು, 10 ಮಂದಿಗೆ ಗಾಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com