ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಾಯ
ಬೆಂಗಳೂರು: ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ತಿರುಪತಿಯ ರುಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಚಂದ್ರಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕಾರಣ ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.
ತಿರುಪತಿ ಜಿಲ್ಲೆಯಲ್ಲಿ ಸಂಭವಿಸಿದ ಸೋಮವಾರ ನಡೆದ ಮತ್ತೊಂದು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಅವರು ತೆರಳುತ್ತಿದ್ದ ಕಾರು ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು ಮತ್ತು ತಮಿಳುನಾಡಿನ ಹೊಸೂರು ಮೂಲದ ಸಂತ್ರಸ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಎರ್ಟಿಗಾದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ನಿವಾಸಿಗಳಾದ ವಿಜಯಲಕ್ಷ್ಮಿ (50), ಸಹನಾ ಬಿ ಎಸ್ (34), ರಜನಿ ಎಸ್ ಆರ್ (27), ಮತ್ತು ಆರ್ ಲೇಖನ್ ಗೌಡ (11) ಮತ್ತು ಹೊಸೂರಿನ ಚಾಲಕ ತ್ಯಾಗರಾಜನ್ (48) ಎಂದು ಗುರುತಿಸಲಾಗಿದೆ.
ಹಾಸನ ಮೂಲದ ಗೀತಮ್ಮ (51) ಮತ್ತು ತ್ಯಾಗರಾಜನ್ ಅವರ ಪುತ್ರ ಕ್ರಿಸ್ವಿನ್ (15) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ತಿರುಪತಿಯ ಎಸ್‌ವಿಆರ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಂದ್ರಗಿರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಪ್ರಸಾದ್ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ