ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: 20 ದಿನಗಳ ಬಳಿಕ ಆರೋಪಿಯ ಅಂತ್ಯಸಂಸ್ಕಾರ

ಏ. 13ರಂದು ರಿತೇಶ ಕುರ್ಮಾ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯ ದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ.
ಆರೋಪಿ ರಿತೇಶ್.
ಆರೋಪಿ ರಿತೇಶ್.
Updated on

ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಕ್ಕೆ ಮುಂದಾಗಿ ಬಳಿಕ ಹತ್ಯೆಗೈದು ಪೊಲೀಸ್ ಎನ್ಕೌಂಟರ್‌ಗೆ ಬಲಿಯಾದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾ‌ ಅಂತ್ಯಸಂಸ್ಕಾರ ಶನಿವಾರ ನಡೆಯಿತು.

20 ದಿನಗಳ ನಂತರ ಸಿಐಡಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನಡೆಯಿತು.

ಏ. 13ರಂದು ರಿತೇಶ ಕುರ್ಮಾ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯ ದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲೆಡೆ ತೀವ್ರ ಪ್ರತಿಭಟನೆಗಳು ನಡೆದಿದ್ದವು.

ಇದರಿಂದ ಒತ್ತಡಕ್ಕೊಳಗಾಗಿದ್ದ ಅಶೋಕ ನಗರ ಠಾಣೆ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿ ಸಂಜೆ ವೇಳೆಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಆರೋಪಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಆತ ಇದ್ದ ಶೆಡ್ ಬಳಿ ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಆರೋಪಿ ಪರಾರಿಯಾಗುವ ತನ್ನ ಪ್ರಯತ್ನ ಮುಂದುವರೆಸಿದ್ದ. ಅನಿವಾರ್ಯವಾಗಿ ಪೊಲೀಸರು ಗುಂಡು ಹಾರಿಸಬೇಕಾಯಿತು. ಈ ವೇಳೆ ಆರೋಪಿ ಮೃತಪಟ್ಟಿದ್ದ.

ಆರೋಪಿ ರಿತೇಶ್.
ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಎನ್ ಕೌಂಟರ್ ಗೆ ಬಲಿಯಾಗಿದ್ದ ವ್ಯಕ್ತಿಯ ಶವಸಂಸ್ಕಾರಕ್ಕೆ ಕೋರ್ಟ್ ಒಪ್ಪಿಗೆ

ಈ ನಡುವೆ ಆರೋಪಿಯ ಶವ ಅ೦ತ್ಯ ಸ೦ಸ್ಕಾರ ಮಾಡಬಾರದು, ಸಾಕ್ಷ್ಯ ನಾಶವಾಗಬಹುದು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಹಾಗಾಗಿ ಎನ್‌ಕೌಂಟರ್‌ಗೆ ಬಲಿಯಾದ ರಿತೇಶ್ ಮೃತದೇಹವನ್ನು ಕೆಎಂಸಿ ಆರ್‌ಐ ಶವಾಗಾರದ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡಲಾಗಿತ್ತು.

ಶವ ಕೊಳೆಯುತ್ತಾ ಬಂದ ಹಿನ್ನೆಲೆ ಸಿಐಡಿ ಪೊಲೀಸರಿಗೆ ಶವ ಡಿಕಾಂಪೋಸ್ ಆಗುತ್ತಿದೆ, ಆದಕಾರಣ ಇದನ್ನು ವಶಕ್ಕೆ ಪಡೆಯುವಂತೆ ಕೆಎಂಸಿಆರ್‌ಐ ಪತ್ರ ಬರೆದಿತ್ತು. ಸಿಐಡಿ ಪೊಲೀಸರು ಶವದ ಸಮಾಧಿ ಮಾಡುವ ಅಗತ್ಯವಿದೆ, ಶವ ಕೊಳೆಯುತ್ತಿದೆ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದರು.

ವಿಚಾರಣೆ ನಡೆಸಿದ್ದ ಕೋರ್ಟ್, ಅಂತ್ಯ ಸಂಸ್ಕಾರ ಮಾಡಲು ಇತ್ತೀಚೆಗೆ ಅನುಮತಿ ನೀಡಿತ್ತು. ಶವವನ್ನು ಹೂಳಬೇಕು ಎಂದು ಆದೇಶಿಸಿತ್ತು. ಕೆಎಂಸಿಆರ್‌ಐ ಶವಗಾರದಲ್ಲಿದ್ದ ಶವವನ್ನು ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ವಿಡಿಯೋ ರೆಕಾರ್ಡ್ ಮೂಲಕ ನಗರದ ಹೊರವಲಯದ ಬಿಡನಾಳ ಸ್ಮಶಾನಕ್ಕೆ ಸಾಗಿಸಲಾಯಿತು.

ಮಹಾನಗರ ಪಾಲಿಕೆ ಸಿಬ್ಬಂದಿ ಶವವನ್ನು ಸ್ಮಶಾನದಲ್ಲಿ ಹೈಕೋರ್ಟ್ ಆದೇಶದಂತೆ ಅಂತ್ಯ ಸಂಸ್ಕಾರ ಮಾಡಿದರು. ಸಿಐಡಿ ಎಸಿ ವೆಂಕಟೇಶ್, ಶಹರ ತಹಸೀರ್ಲ್ದಾ ಕಲನಗೌಡ ಹಾಗೂ ಎಸಿಪಿ ಶಿವಪ್ರಕಾಶ್ ನಾಯಕ್ ಅವರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇನ್ನು ಆರೋಪಿಯ ಮೂಲ ಹುಡುಕಲು ಪೊಲೀಸರು ಸಾಕಷ್ಟು ಪ್ರಯತ್ನ ಪಟ್ಟಿದ್ದಾರಾದರೂ ಯಾವುದೇ ಫಲ ನೀಡಿಲ್ಲ. ಬಿಹಾರ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧೆಡೆ ತೆರಳಿ ಆತನ ಕುಟುಂಬಸ್ಥರನ್ನು ಹುಡುಕಾಡಿದ್ದಾರೆನ್ನಲಾಗಿದ್ದು, ಕುಟುಂಬಸ್ಥರು ಮಾತ್ರ ಪತ್ತೆಯಾಗಿಲ್ಲ ಎಂದು ವರದಿಗಳು ತಿಳಿಸಿವೆ. ಹೀಗಾಗಿ ಪೊಲೀಸರೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com