ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಆರಂಭ: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ

ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು. ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ.
CM Siddaramaiah pressmeet
ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು. ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತ ಮೇ 5 ರಿಂದ ಶುರುವಾಗಲಿದೆ. ಇದಕ್ಕಾಗಿ ವಿಶೇಷ ಶಿಬಿರಗಳಲ್ಲಿ ಈ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಮೀಕ್ಷೆ ನಡೆಸಲು 60 ದಿನಗಳ ಕಾಲ ಡೆಟ್ ಲೈನ್ ಕೊಡಲಾಗಿದೆ. ಜಾತಿಗಣತಿಯೂ ಒಳಮೀಸಲಾತಿ ಗಣತಿಗೂ ಯಾವುದೇ ಸಂಬಂಧ ಇಲ್ಲ. ಇದು ಕೇವಲ ಎಸ್‌ಸಿ ಸಮುದಾಯಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಎಸ್‌ಸಿ ಒಳಮೀಸಲಾತಿ ಸಮೀಕ್ಷೆಗೆ ಸುಮಾರು 100 ಕೋಟಿ ಖರ್ಚು ಆಗಬಹುದು. ನಾಗಮೋಹನ್ ದಾಸ್ ಅವರು ಏನು ಶಿಫಾರಸು ಮಾಡುತ್ತಾರೆ ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025 ವರೆಗೆ ನಡೆಯಲಿದೆ.

CM Siddaramaiah pressmeet
INTERVIEW | ಆಂತರಿಕ ಮೀಸಲಾತಿಯಿಂದ ಏಕತೆ ಸಾಧ್ಯ: ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್‌ ದಾಸ್

ಎರಡನೇ ಹಂತದಲ್ಲಿ 19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು. ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.

ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ ಎಂದರು.

2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು. ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದಿದ್ದಾರೆ.

ಶಿಕ್ಷಣ ಇಲಾಖೆಯಿಂದಲೇ 57 ಸಾವಿರ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳಲಾಗುತ್ತಿದೆ. ಸಮೀಕ್ಷೆದಾರರಿಗೆ ಗುರುತಿನ ಚೀಟಿ ನೀಡಲಾಗಿದೆ. ವೈಜ್ಞಾನಿಕ ಸಮೀಕ್ಷೆಗಾಗಿ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದ್ದು, ಅದರ ಮೂಲಕವೇ ದಾಖಲೀಕರಣ ಮಾಡಲಾಗುತ್ತದೆ. ಮತದಾರರ ಪಟ್ಟಿಯಲ್ಲಿರುವ ವಿಳಾಸದ ಆಧಾರದ ಮೇಲೆ ಮನೆ ಮನೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಕುಟುಂಬಗಳನ್ನು ಗುರುತಿಸಲಾಗುತ್ತದೆ.‌ ಪರಿಶಿಷ್ಟ ಜಾತಿಯವರ ಮನೆಯ ಪ್ರತಿಯೊಂದು ಸದಸ್ಯನ ಮಾಹಿತಿಯನ್ನು ಮೊಬೈಲ್ ಆಪ್‌ನಲ್ಲಿ ಭರ್ತಿ ಮಾಡಲಾಗುತ್ತದೆ. ಜಾತಿ ಹಾಗೂ ಮೂಲ ಜಾತಿಯನ್ನು ಕಡ್ಡಾಯವಾಗಿ ನಮೂದು ಮಾಡಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com