KPSC ಮತ್ತೊಂದು ಮಹಾಲೋಪ ಬಯಲು: ರಾಜ್ಯ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ

KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ.
BY Vijayendra
ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ. ಇದೀಗ ಮತ್ತೊಂದು ಪ್ರಮಾದವೆಸಗಿ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜತೆ ಚೆಲ್ಲಾಟವಾಡಿ ಸಾರ್ವಜನಿಕ ವಲಯದಲ್ಲೂ ಆಕ್ರೋಶಕ್ಕೆ ಗುರಿಯಾಗಿದೆ.

ಸೋಮವಾರ ನಡೆದ ಪರೀಕ್ಷೆಯಲ್ಲಿ ಬೆಂಗಳೂರಿನ ಕೇಂದ್ರವೊಂದರಲ್ಲಿ ಸೀಲ್ ತೆರೆದಿದ್ದ ಪ್ರಶ್ನೆಪತ್ರಿಕೆಯ ಬಂಡಲ್ ಪತ್ತೆಯಾಗಿದ್ದು, ಇದನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರೂ ಸಹ ಒಪ್ಪಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ಹುಟ್ಟುಹಾಕಿದೆ. ಕರ್ನಾಟಕ ಲೋಕಸೇವಾ ಆಯೋಗವು ಪದೇ ಪದೇ ಎಡವಟ್ಟುಗಳು, ಗೊಂದಲಗಳನ್ನು ಸೃಷ್ಟಿಸಿ ದೇಶದೆದುರು ಕರ್ನಾಟಕದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದು ದುರಂತದ ದೌರ್ಭಾಗ್ಯವೇ ಸರಿ ಎಂದಿದ್ದಾರೆ.

ಈ ಕೂಡಲೇ ಪರೀಕ್ಷಾ ಕೊಠಡಿಗೆ ಪ್ರಶ್ನೆಪತ್ರಿಕೆಗಳು ಬರುವ ಮುನ್ನವೇ ಬಂಡಲ್ ತೆರೆದಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಕೆಪಿಎಸ್ಸಿ ಪರೀಕ್ಷಾ ಅಭ್ಯರ್ಥಿಗಳಿಗಾಗುತ್ತಿರುವ ಬಹುದೊಡ್ಡ ಅನ್ಯಾಯ, ದ್ರೋಹಗಳನ್ನು ಸರಿಪಡಿಸದಿದ್ದರೆ ಲಕ್ಷಾಂತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆ ತೆರಬೇಕಾದೀತು ಎಂದು ಎಚ್ಚರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

BY Vijayendra
ಕೊನೆ ಕ್ಷಣದಲ್ಲಿ KPSC ಪ್ರವೇಶ ಪತ್ರ ವಿತರಣೆ: ಪರೀಕ್ಷೆ ಕಳೆದುಕೊಂಡ 50ಕ್ಕೂ ಹೆಚ್ಚು ಅಭ್ಯರ್ಥಿಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com