
ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಗುರುವಾರ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಹರಿಹರ ನಿವಾಸಿ ಫರಾನ್(27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ(16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ(20), ಪುಲಖಾನ್(17) ಎಂದು ಗುರುತಿಸಲಾಗಿದೆ.
ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿ ಅಶೋಕ್ ಎಂಬುವವರ ಸಂಬಂಧಿಕರು ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement