ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ನಮಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ನನ್ನ ಮಗನ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ನಾವು ಮನವಿ ಮಾಡಿದ್ದೇವೆ, ನಮಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯಪಾಲರು ಹೇಳಿರುವುದಾಗಿ ಅವರು ಹೇಳಿದರು
BJP, Suhas' kin meet Karnataka Governor, seek NIA probe
NIA ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
Updated on

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ.

ರಾಜಭವನಕ್ಕೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸಲು ರಾಜ್ಯ ಸರಕಾರಕ್ಕೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಕೋರಿತು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುಹಾಸ್ ಶೆಟ್ಟಿ ತಾಯಿ, ನಮಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ನನ್ನ ಮಗನ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ನಾವು ಮನವಿ ಮಾಡಿದ್ದೇವೆ, ನಮಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯಪಾಲರು ಹೇಳಿರುವುದಾಗಿ ಅವರು ಹೇಳಿದರು. ನಮ್ಮ ಮಗ ಹಿಂದೂ ಕಾರ್ಯಕರ್ತ, ರೌಡಿ ಅಲ್ಲ ಎಂದು ಹೇಳಿದರು. ನಾನು ಆರೋಗ್ಯವಾಗಿಲ್ಲ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದೇನೆ, ಆದರೆ ನನ್ನ ಮಗನಿಗೆ ನ್ಯಾಯ ಸಿಗಲು ನನ್ನ ಕೊನೆಯ ಉಸಿರಿನವರೆಗೂ ಹೋರಾಡುತ್ತೇನೆ ಎಂದರು.

ನಂತರ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಮ್ ಯುವಕ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್ 25ಲಕ್ಷ ರೂ.ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದರು.

BJP, Suhas' kin meet Karnataka Governor, seek NIA probe
ಮೇ 11 ರಂದು ಸುಹಾಸ್ ಶೆಟ್ಟಿ ನಿವಾಸಕ್ಕೆ ಜೆ.ಪಿ ನಡ್ಡಾ ಭೇಟಿ! ತನಿಖೆಯಲ್ಲಿ ಲೋಪ, ಬಿಜೆಪಿ ನಾಯಕರ ಆರೋಪ

ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಸ್ಪೀಕರ್ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದು ಅವರು ತಿಳಿಸಿದರು.

ಈ ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಚರ್ಚೆ ನಡೆಯುತ್ತಿದೆ. ಪಿಎಫ್‍ಐ ನಂಟು ಕಾಣುತ್ತಿದೆ. ಸುಹಾಸ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ‘ಮಂಗಳೂರು ಚಲೋ’ ಹಮ್ಮಿಕೊಳ್ಳಲು ತೀರ್ಮಾನಿಸಿತ್ತು. ‘ಆಪರೇಷನ್ ಸಿಂಧೂರ್’ ಪ್ರಾರಂಭವಾದ ಸಂದರ್ಭದಲ್ಲಿ ಶಾಂತಿ ಕಾಪಾಡಲು ಮತ್ತು ದೇಶದ ಜೊತೆ ನಿಲ್ಲಬೇಕೆಂದು ಸುಮ್ಮನೆ ಇದ್ದೆವು. ಆದರೆ, ಸುಹಾಸ್ ಹತ್ಯೆ ಆದ ನಂತರದಲ್ಲಿ ನಡೆಯುತ್ತಿರುವ ತನಿಖೆಯು ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com